ಕೆಡಿ ಚಿತ್ರತಂಡವನ್ನು ಸಂಜಯ್ ದತ್ ಸೇರಿಕೊಂಡಿದ್ದಾರೆ.
ಅಕ್ಟೋಬರ್ ನಲ್ಲಿ ನಡೆದ ಫಸ್ಟ್ ಲುಕ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕರು ಸಂಜಯ್ ದತ್ ಅವರು ನಟಿಸಲಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಸಂಜಯ್ ದತ್ ಮುಂದಿನ 20 ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಭೂಗತ ಜಗತ್ತಿನ ಸುತ್ತಲಿನ ನೈಜ ಘಟನೆಗಳನ್ನು ಆಧರಿಸಿ 1970 ರ ದಶಕದಲ್ಲಿ ನಡೆಯುವ ಕೆಡಿ ಚಿತ್ರದಲ್ಲಿ ಸಂಜಯ್ ದತ್ ಖಳನಾಯಕನಾಗಿ ನಟಿಸಲಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ ಕೆಡಿಗೆ ಅರ್ಜುನ್ ಜನ್ಯ ಅವರ ಸಂಗೀತವಿದೆ . ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಸಿನಿಮಾ ಈಗಾಗಲೇ ಗಮನ ಸೆಳೆದಿದೆ.
___

Be the first to comment