ಕೆಡಿ ಚಿತ್ರದ “ಸರ್ಕೆ ಚುನರ್ ತೇರಿ ಸರ್ಕೆ” ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.
ಈ ಹಾಡಿನಿಂದ ಸಮಾಜಕ್ಕೆ “ಉದ್ದೇಶಪೂರ್ವಕವಲ್ಲದ” ಹಾನಿ ಉಂಟಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ಹೇಳಿದ್ದಾರೆ.
ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ನೇತೃತ್ವದಲ್ಲಿ ನಡೆದ ವಿಚಾರಣೆಯ ಸಮಯದಲ್ಲಿ ಹಾಡಿನಲ್ಲಿ ಮಹಿಳೆಯರ ಬಗ್ಗೆ ಅಸಭ್ಯತೆ ಮತ್ತು ಅಶ್ಲೀಲ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು.
ಮಹಿಳಾ ಸಬಲೀಕರಣದ ಪ್ರಯತ್ನಗಳ ಭಾಗವಾಗಿ 50 ಬುಡಕಟ್ಟು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಯೋಜಕತ್ವ ಮಾಡಲು ಸಂಜಯ್ ದತ್ ಬದ್ಧರಾಗಿದ್ದಾರೆ ಎಂದು ಆಯೋಗ ತಿಳಿಸಿದೆ.
ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ ಅವರು ವಿದೇಶದಲ್ಲಿ ಇರುವುದರಿಂದ ಹಾಜರಾಗಲು ಸಾಧ್ಯವಾಗಿಲ್ಲ. ಅವರು ವಿಚಾರಣೆಗೆ ಹೊಸ ದಿನಾಂಕವನ್ನು ಕೋರಿದ್ದಾರೆ.
ನೋರಾ ಫತೇಹಿ ಮತ್ತು ಸಂಜಯ್ ದತ್ ಡ್ಯಾನ್ಸ್ ಮಾಡಿರುವ ಸರ್ಸೆ ಸಾಂಗ್ ಬಿಡುಗಡೆಯಾದ ಕೂಡಲೇ ವಿವಾದ ಭುಗಿಲೆದ್ದಿತು. ಹಾಡಿನಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಅಶ್ಲೀಲ ಸಾಹಿತ್ಯ ಮತ್ತು ದೃಶ್ಯಗಳಿವೆ ಎಂದು ಅನೇಕರು ಆರೋಪಿಸಿದ್ದರು. ಈ ಹಾಡು ಹಿಂದಿಯಲ್ಲಿ ಕೂಡಲೇ ನಿಷೇಧಕ್ಕೆ ಒಳಗಾಗಿದೆ.
_





Be the first to comment