ಧ್ರುವ ಚಿತ್ರದಲ್ಲಿ ಸಂಜಯ್ ದತ್ ಖಳ

ನಟ ಧ್ರುವ ಸರ್ಜಾ ನಟನೆಯ ಹೊಸ ಸಿನಿಮಾದಲ್ಲಿ ಸಂಜಯ್ ದತ್ ಅವರನ್ನು ಖಳನಾಯಕನನ್ನಾಗಿ ಕರೆತರುವ ಬಗ್ಗೆ ಪ್ರಯತ್ನಗಳು ನಡೆದಿವೆ.

ಪ್ರೇಮ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸಲಿದ್ದಾರೆ. ಆ ಸಿನಿಮಾಕ್ಕೆ ಸಂಜಯ್ ದತ್ ಅನ್ನು ವಿಲನ್ ಆಗಿ ಕರೆ ತರುವ ಬಗ್ಗೆ ಚಿತ್ರತಂಡ ಯೋಜನೆ ರೂಪಿಸಿದೆ ಎಂದು ತಿಳಿದು ಬಂದಿದೆ.

ಧ್ರುವ ಸರ್ಜಾ ಸಿನಿಮಾಕ್ಕೆ ಸಂಜಯ್ ದತ್ ಅವರನ್ನು ಕರೆತರುವ ಬಗ್ಗೆ ಪ್ರೇಮ್ ಯೋಜನೆ ರೂಪಿಸಿದ್ದಾರೆ. ಚಿತ್ರಕ್ಕೆ ಅಜಯ್ ದೇವಗನ್ ಅವರನ್ನು ವಿಲನ್ ಆಗಿ ಕರೆತರಲು ಯೋಜನೆ ಹಾಕಿಕೊಳ್ಳಲಾಗಿತ್ತು. ಅಜಯ್ ದೇವಗನ್ ಜೊತೆಗೆ ಮಾತುಕತೆ ಮಾಡಲಾಗಿತ್ತಾದರೂ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅಜಯ್ ದೇವಗನ್ ಸಿನಿಮಾದಿಂದ ಹೊರಗೆ ಉಳಿದರು. ಈಗ ಸಂಜಯ್ ದತ್ ಅವರನ್ನು ಕರೆತರಲು ಯೋಜನೆ ರೂಪಿಸಲಾಗಿದ್ದು ಮಾತುಕತೆ ಚಾಲ್ತಿಯಲ್ಲಿದೆ ಎಂದು ತಿಳಿದು ಬಂದಿದೆ.

ಯಶ್ ನಟನೆಯ ಕೆಜಿಎಫ್ 2 ಚಿತ್ರದಲ್ಲಿ ಸಂಜಯ್ ದತ್ ಅವರು ಅಧೀರನ ಪಾತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಸಂಜಯ್ ದತ್ ಅವರ ಲುಕ್ ಸಾಕಷ್ಟು ಗಮನ ಸೆಳೆದಿದೆ. ಕೆಲದಿನಗಳ ಹಿಂದೆಯಷ್ಟೇ ಸಂಜಯ್ ದತ್ ಅವರು ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಧ್ರುವ ಸರ್ಜಾ ಈಗ ‘ಮಾರ್ಟಿನ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಎಪಿ ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಯೋಧನ ಪಾತ್ರದಲ್ಲಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಈ ಚಿತ್ರದ ಬಳಿಕ ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ.

ಪ್ರೇಮ್ ತಮ್ಮ ಚಿತ್ರಕ್ಕೆ ನಾಯಕಿಯಾಗಿ ಬಾಲಿವುಡ್ ಹೀರೋಯಿನ್ ನ್ನು ಕರೆ ತರುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಸಿನಿಮಾವನ್ನು ಕೆವಿಎಲ್ ಪ್ರೋಡಕ್ಷನ್ ಹೌಸ್‌ ವತಿಯಿಂದ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾವನ್ನು ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದೆ.

ಪ್ರೇಮ್ ‘ಏಕ್ ಲವ್ ಯಾ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿವೆ. ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ಬರಲಿದ್ದು, ಚಿತ್ರಕ್ಕೆ ರಕ್ಷಿತಾ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಬಿಡುಗಡೆ ಬಳಿಕ ಧ್ರುವ ಸರ್ಜಾ ಜೊತೆಗಿನ ಸಿನಿಮಾ ಜನವರಿ ತಿಂಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!