ನಟ ಶ್ರೀನಗರ ಕಿಟ್ಟಿ, ರಚಿತಾ ರಾಮ್ ಜೋಡಿಯಾಗಿ ನಟಿಸಿರುವ ‘ ಸಂಜು ವೆಡ್ಸ್ ಗೀತಾ-2’ ಜನವರಿ 10ರಂದು ತೆರೆಗೆ ಬರಲಿದೆ. ಕಿಟ್ಟಿ ಹಾಗೂ ರಮ್ಯಾ ಜೋಡಿಯಾಗಿದ್ದ ಸಂಜು ವೆಡ್ಸ್ ಗೀತಾ ಸೂಪರ್ ಹಿಟ್ ಆಗಿತ್ತು. ಅದೇ ಶೀರ್ಷಿಕೆ ಇಟ್ಟುಕೊಂಡು ನಿರ್ದೇಶಕ ನಾಗಶೇಖರ್ ಈ ಸಲ ಮತ್ತೊಂದು ಪ್ರೇಮಕಥೆಯೊಂದಿಗೆ ಬಂದಿದ್ದಾರೆ.
ನಟ ಉಪೇಂದ್ರ ಚಿತ್ರದ ಒಂದು ಹಾಡು ಬಿಡುಗಡೆಗೊಳಿಸಿದ್ದರೆ, ಸುದೀಪ್ ಮತ್ತೊಂದು ಹಾಡು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಬೆಂಬಲವಾಗಿ ನಿಂತಿದ್ದಾರೆ.
‘ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನೆಂದು ಗೊತ್ತಾಯ್ತು. ಅದನ್ನು ಕೇಳಿದಾಗಲೇ ಈ ಸಿನಿಮಾ ಸೂಪರ್ ಸಕ್ಸಸ್ ಆಗುತ್ತದೆ ಎಂದಿದೆ. ಈ ಹಾಡನ್ನು ನೋಡಿದಾಗ ನನ್ನ ನಂಬಿಕೆ ಇನ್ನಷ್ಟು ಗಟ್ಟಿಯಾಗಿದೆ’ ಎಂದಿದ್ದರು ಉಪೇಂದ್ರ.
ಪವಿತ್ರ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ಚಿತ್ರಕ್ಕೆ ನಾಗಶೇಖರ್ ನಿರ್ದೇಶನವಿದೆ. ಈ ಗೀತೆಗೆ ಕವಿರಾಜ್ ಸಾಹಿತ್ಯ ರಚಿಸಿದ್ದು, ಶ್ರೀಧರ್ ವಿ.ಸಂಭ್ರಮ್ ಸಂಗೀತ ನೀಡಿದ್ದಾರೆ.
‘ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಂಡೆ. ಒಟ್ಟು ಆರು ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ಲೆಂಡ್ ಸೈನಿಕನೊಬ್ಬ ತನ್ನ ರಾಣಿಯನ್ನು ಹೃದಯದಿಂದ ಪ್ರೀತಿ ಮಾಡಿರುತ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲು ಸಾಧ್ಯವಾಗಿರುವುದಿಲ್ಲ ಎಂಬ ಸನ್ನಿವೇಶದ ಹಾಡಿದು’ ಎಂದು ನಾಗಶೇಖರ್. ಹೇಳಿದ್ದಾರೆ.
ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಶ್ರೀಧರ್ ವಿ. ಸಂಭ್ರಮ್ ಸಂಗೀತ ಈ ಚಿತ್ರಕ್ಕಿದೆ. ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್, ಖಳನಟ ಸಂಪತ್ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ತಾರಾಗಣದಲ್ಲಿದ್ದಾರೆ.
Be the first to comment