‘ಸಂಜು ವೆಡ್ಸ್‌ ಗೀತಾ-2’ ಹಾಡಿನ ಚಿತ್ರೀಕರಣ ಪ್ರಾರಂಭ

‘ಸಂಜು ವೆಡ್ಸ್ ಗೀತಾ-2’  ಚಿತ್ರದ ಹಾಡೊಂದರ ಅದ್ದೂರಿ ಚಿತ್ರೀಕರಣ ಕುಣಿಗಲ್‌ನಲ್ಲಿ ನಡೆದಿದೆ.

ನಾಗಶೇಖರ್‌ ನಿರ್ದೇಶನದ ‘ಸಂಜು ವೆಡ್ಸ್ ಗೀತಾ-2’ ಚಿತ್ರ ನಾಲ್ಕನೇ ಹಂತದ ಚಿತ್ರೀಕರಣ ಪ್ರಾರಂಭಿಸಿದೆ. ಶ್ರೀನಗರ ಕಿಟ್ಟಿ, ರಚಿತಾ ರಾಮ್‌ ಜೋಡಿಯಾಗಿ ನಟಿಸುತ್ತಿರುವ ಚಿತ್ರದ ಹಾಡಿನ ಚಿತ್ರೀಕರಣ ನಡೆದಿದೆ.

”ಸ್ವಿಡ್ಜರ್ಲೆಂಡ್‌ನಲ್ಲಿ 15 ದಿನ ಹನ್ನೊಂದು ಜಾಗಗಳಲ್ಲಿ ಚಿತ್ರೀಕರಣ ಮಾಡಿದೆವು.  ಐದು ದಿನಗಳ ಕಾಲ ಹಾಡಿನ ಚಿತ್ರೀಕರಣ ನಡೆದಿದೆ. ಅದ್ದೂರಿ ಸೆಟ್‌ನಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ₹50 ಲಕ್ಷ ಖರ್ಚು ಮಾಡಿದ್ದೇವೆ. ಶಿಡ್ಲಘಟ್ಟದ ರೇಷ್ಮೆಗೆ ದೊಡ್ಡ ಮಾರುಕಟ್ಟೆ ಇದೆ. ನಮ್ಮ ರೇಷ್ಮೆ ನೂಲಿಗೆ ಒಳ್ಳೆ ಬೆಲೆ ಬೇಕು ಎಂದು ಹೋರಾಡುವ ಇಬ್ಬರು ಪ್ರೇಮಿಗಳ ಕಥೆ ಈ ಚಿತ್ರದಲ್ಲಿದೆ” ಎಂದಿದ್ದಾರೆ ನಿರ್ದೇಶಕ ನಾಗಶೇಖರ್‌.

ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಐದು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ಹಾಡಿದ್ದಾರೆ.

ರಾಗಿಣಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ ‘ಸಂಜು ವೆಡ್ಸ್ ಗೀತಾ-2’ ಚಿತ್ರದ ವಿಶೇಷ ಪಾತ್ರಗಳಲ್ಲಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!