‘ಸ್ವಪ್ನ ಮಂಟಪ’ ಚಿತ್ರೀಕರಣ ಪೂರ್ಣ

ವಿಜಯ ರಾಘವೇಂದ್ರ ಹಾಗೂ ಕನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ ನಟನೆಯ ‘ಸ್ವಪ್ನ ಮಂಟಪ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ನಿರ್ಮಿಸಿದ್ದಾರೆ. ಈ ಸಿನಿಮಾ ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಚಿತ್ರಕ್ಕೆ ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ನಟ್ರಾಜ್ ಶಿವು ಮತ್ತು ಪ್ರವೀಣ್ ಚಿತ್ರದ ಸಹನಿರ್ದೇಶಕರಾಗಿದ್ದಾರೆ.

ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡವು ಡಬ್ಬಿಂಗ್ ಕೆಲಸಗಳನ್ನೂ ಮುಗಿಸಿದೆ. ಕನಕಪುರ ರಸ್ತೆಯಲ್ಲಿರುವ ಹಳ್ಳಿಯೊಂದರಲ್ಲಿ ಹೊಸಮನೆ ಮೂರ್ತಿ ಹಾಕಿದ್ದ ಸೆಟ್‌ನಲ್ಲಿ ಚಿತ್ರೀಕರಣ ನಡೆಸಲಾಗಿದೆ.

”ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ, ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಅದನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ” ಎಂದಿದ್ದಾರೆ ಬರಗೂರು ರಾಮಚಂದ್ರಪ್ಪ.

ಸುಂದರರಾಜ, ಶೋಭಾ ರಾಘವೇಂದ್ರ, ರಜನಿ, ಮಹಾಲಕ್ಷ್ಮಿ, ಸುಂದರರಾಜ ಅರಸು, ರಾಜಪ್ಪ ದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಚಿತ್ರದ ತಾರಾಗಣದಲ್ಲಿ ಇದ್ದಾರೆ.

ನಾಗರಾಜ ಆದವಾನಿ ಛಾಯಾಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ ಇದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!