ನವೆಂಬರ್ 17ಕ್ಕೆ ‘ಸಪ್ತ ಸಾಗರದಾಚೆ….ಸೈಡ್​ ಬಿ’ ರಿಲೀಸ್

ರಕ್ಷಿತ್​​ ಶೆಟ್ಟಿ ಮುಖ್ಯಭೂಮಿಕೆಯ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ನವೆಂಬರ್ 17ಕ್ಕೆ ರಿಲೀಸ್ ಆಗಲಿದೆ.

 ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾ ಸಿನಿಪ್ರಿಯರ ಮನ ಗೆಲ್ಲುವಲ್ಲಿ ಯಶ ಕಂಡಿದೆ. ಕನ್ನಡದಲ್ಲಿ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಸಿನಿಮಾ ತೆಲುಗಿಗೂ ಡಬ್​ ಆಗಿ ಹೊರ ರಾಜ್ಯದ ಸಿನಿಪ್ರಿಯರ ಮನ ಗೆದ್ದಿದೆ. ಹೇಮಂತ್​ ಎಂ ರಾವ್ ನಿರ್ದೇಶನದ  ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾದಲ್ಲಿ ಮನು ಮತ್ತು ಪ್ರಿಯಾ ಪಾತ್ರದಲ್ಲಿ ರಕ್ಷಿತ್​ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್​ ಕಾಣಿಸಿಕೊಂಡಿದ್ದು, ಸಿನಿಮಾ ಒಟಿಟಿಯಲ್ಲೂ ಲಭ್ಯವಿದೆ. ಇದೀಗ ಚಿತ್ರದ ಮತ್ತೊಂದು ಭಾಗ ಬಿಡುಗಡೆಗೆ ಸಜ್ಜಾಗುತ್ತಿದೆ.

ಸಿನಿಮಾದ ವಿಶೇಷವೆಂದರೆ ಅತಿ ಕಡಿಮೆ ಅವಧಿಯಲ್ಲಿ ಚಿತ್ರದ ಮತ್ತೊಂದು ಭಾಗ ಬಿಡುಗಡೆ ಆಗುತ್ತಿದೆ. ಕಳೆದ ಸೆಪ್ಟೆಂಬರ್​ 1 ರಂದು ಪಾರ್ಟ್ 1 ಬಿಡುಗಡೆ ಆಗಿತ್ತು. ಅಕ್ಟೋಬರ್​ 20 ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿತ್ತು. ಬಳಿಕ ಅಕ್ಟೋಬರ್​ 27 ರಂದು ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಇದೀಗ ಸಿನಿಮಾ ನವೆಂಬರ್ 17ಕ್ಕೆ ರಿಲೀಸ್ ಆಗಲಿದೆ. ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್​ ಶೆಟ್ಟಿ ಬಹಿರಂಗಪಡಿಸಿದ್ದಾರೆ.

ರಕ್ಷಿತ್​​ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ.

‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾ ಮನು ಮತ್ತು ಪ್ರಿಯಾಳ ಪ್ರೇಮಕಥೆಯನ್ನು ಮನಮುಟ್ಟುವಂತೆ ಪ್ರಸ್ತುತ ಪಡಿಸಿತ್ತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!