777 ಚಾರ್ಲಿ ಚಿತ್ರದ ಸಕ್ಸಸ್ ಖುಷಿಯಲ್ಲಿ ನಟ ರಕ್ಷಿತ್ ಶೆಟ್ಟಿ ಸಪ್ತ ಸಾಗರದಾಚೆ ಚಿತ್ರದ ಶೂಟಿಂಗ್ ಚಿತ್ರ ಹಂಚಿಕೊಂಡಿದ್ದಾರೆ.
ಹೇಮಂತ್ ಎಂ. ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಟೀಸರ್ ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಎರಡು ಶೇಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ದ್ವಿತೀಯಾರ್ಧದ ಭಾಗಕ್ಕಾಗಿ ರಕ್ಷಿತ್ ತೂಕ ಹೆಚ್ಚಿಸಿಕೊಳ್ಳಲಿದ್ದಾರೆ.
ರಕ್ಷಿತ್ಗೆ ಜೋಡಿಯಾಗಿ ನಟಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಹೆಸರು ಮನು, ರುಕ್ಮಿಣಿ ಹೆಸರು ಪ್ರಿಯಾ ಎಂದು ಇಡಲಾಗಿದೆ. ಮನು-ಪ್ರಿಯಾ ಜೋಡಿಯಾ ಫೋಟೋ ಕೂಡ ವೈರಲ್ ಆಗಿದೆ.
777 ಚಾರ್ಲಿ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ರಕ್ಷಿತ್ ಶೆಟ್ಟಿ, ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣದಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ತೆರೆ ಕಾಣುವ ಸಾಧ್ಯತೆ ಇದೆ.
___

Be the first to comment