`ಸಾರಾಂಶ’ ಟ್ರೈಲರ್ ಬಿಡುಗಡೆ

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಟ್ರೈಲರ್ ಬಿಡುಗಡೆಗೊಂಡಿದೆ. ಚಿತ್ರ ಫೆಬ್ರವರಿ 15ರಂದು ತೆರೆಗಾಣಲಿದೆ.

ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ನ್ನು ಬಿಡುಗಡೆಗೊಳಿಸಿದರು. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ನಿರ್ದೇಶಕ ಸೂರ್ಯ ವಸಿಷ್ಠ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ. ಟ್ರೈಲರ್ ನಲ್ಲಿ  ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ.

ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಇತರರು ಚಿತ್ರದಲ್ಲಿ ನಟಿಸಿದ್ದಾರೆ.

ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಮುಂತಾದವರು ಹಾಜರಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!