ಏಪ್ರಿಲ್ 30ರಂದು ‘ಬರ್ಕ್ಲಿ’ ಚಿತ್ರದ ಅದ್ಧೂರಿ ಟೀಸರ್ ಬಿಡುಗಡೆ

ಸಂತೋಷ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮ ಪ್ರತಿ‌ ಸಿದ್ದವಾಗಲಿದೆ. ಕರಿಯ, ಗಣಪ, ಕರಿಯ 2 ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ ಬರ್ಕ್ಲಿ‌.

ಈ ಸಿನಿಮಾಕ್ಕೆ ಸುಮಂತ್ ಕ್ರಾಂತಿ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಬರ್ಕ್ಲಿ’ ಎಂದ ಕೂಡಲೇ ಎಲ್ಲರೂ ಸಿಗರೇಟ್ ಒಂದರ ಹೆಸರು ಎಂದುಕೊಳ್ಳುತ್ತಾರೆ. ಆದರೆ ನಮ್ಮ ಬರ್ಕ್ಲಿ ಚಿತ್ರಕ್ಕೂ ಸಿಗರೇಟ್​ಗೂ ಯಾವುದೇ ಸಂಬಂಧವಿಲ್ಲ. ಶೀರ್ಷಿಕೆಯ ಅರ್ಥವೇ ಬೇರೆ ಎನ್ನುತ್ತಾರೆ ನಿರ್ದೇಶಕ ಸುಮಂತ್ ಕ್ರಾಂತಿ.

ಗಣಪ, ಕರಿಯ 2 ಚಿತ್ರಗಳಲ್ಲಿ ನಟಿಸಿ ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ಕೇಂದ್ರ ಸರ್ಕಾರದ ‘ನೋ ಸ್ಮೋಕಿಂಗ್’ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ. ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದ ತಾರಾಬಳಗ ಈ ಚಿತ್ರದಲ್ಲಿದೆ.

ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!