ನಿರ್ಮಾಪಕ ದೇವರಾಜ್ ಅವರು ‘ಡಿ ಕ್ರಿಯೇಷನ್ಸ್’ ಲಾಂಛನದ ಮೂಲಕ ನಿರ್ಮಾಣ ಮಾಡಿರುವ ‘SCAM 1770’ ಸಿನಿಮಾ ತೆರೆಗೆ ಬರಲು ಸಕಲ ಸಿದ್ಧತೆ ನಡೆಸಿದೆ. ಈ ಸಿನಿಮಾಗೆ ವಿಕಾಸ್ ಪುಷ್ಪಗಿರಿ ಅವರು ನಿರ್ದೇಶನ ಮಾಡಿದ್ದಾರೆ. ಈ ವಾರ, ಅಂದರೆ ಏಪ್ರಿಲ್ 12ರಂದು ರಾಜ್ಯಾದ್ಯಂತ ‘SCAM 1770’ ಚಿತ್ರ ಬಿಡುಗಡೆ ಆಗುತ್ತಿದೆ. ಒಂದು ವಿಶೇಷ ಕಥಾಹಂದರದ ಕಾರಣದಿಂದ ಈ ಸಿನಿಮಾ ಮೇಲೆ ಕೌತುಕ ಇದೆ. ರಂಜನ್, ನಿಶ್ವಿತಾ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪ್ರೇಕ್ಷಕರು ಈ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಬಂದಿದೆ.
ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೆನೆಲ್ಲಾ ನಡೆಯುತ್ತಿದೆ ಎಂಬ ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ SCAM 1770. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು.
ಡಾ||ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಅವರು ಕಥೆ ಬರೆದಿದ್ದು, ವಿಕಾಸ್ ಪುಷ್ಪಗಿರಿ ಹಾಗೂ ಶಂಕರ್ ರಾಮನ್ ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ – ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನ “SCAM 1770” ಚಿತ್ರಕ್ಕಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ರಂಜನ್(ದಡ್ಡ ಪ್ರವೀಣ), ನಿಶ್ವಿತ(ನಾಯಕಿ), ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Be the first to comment