ಹಿರಿಯ ನಟ ರಾಜೇಶ್ ಇನ್ನಿಲ್ಲ

ಕನ್ನಡದ ಹಿರಿಯ ನಟ ರಾಜೇಶ್​ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ಅವರು ಉಸಿರಾಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾರೆ.

ರಾಜೇಶ್​ ಅವರಿಗೆ 82 ವರ್ಷ ವಯಸ್ಸಾಗಿತ್ತು. ರಾಜೇಶ್​​ ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು ಕಂಬನಿ ಮಿಡಿದಿದ್ದಾರೆ.

ಇಂದು ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ನಂತರ ಅಂತ್ಯಕ್ರಿಯೆ ನಡೆಯಲಿದೆ.

ರಾಜೇಶ್ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಭೂಮಿ ಮೂಲಕ ನಟನೆ ಆರಂಭಿಸಿದ ಅವರು ‘ಶಕ್ತಿ ನಾಟಕ ಮಂಡಳಿ’ ಹೆಸರಿನ ನಾಟಕ ಸಂಸ್ಥೆ ಸ್ಥಾಪಿಸಿ ಹಲವು ನಾಟಗಳನ್ನು ಪ್ರಸ್ತುತ ಪಡಿಸಿದ್ದರು. ‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.

‘ನಮ್ಮ ಊರು’ ಸಿನಿಮಾ ರಾಜೇಶ್ ಅವರಿಗೆ ಹೆಸರು ತಂದುಕೊಟ್ಟಿತ್ತು. ಅವರು ‘ಸೊಸೆ ತಂದ ಸೌಭಾಗ್ಯ’, ‘ದೇವರ ದುಡ್ಡ’, ‘ಕಲಿಯುಗ’, ‘ದೇವರ ಗುಡಿ’, ‘ವೀರ ಸಂಕಲ್ಪ’, ‘ಗಂಗೆ ಗೌರಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಭಿನಯದ ಕೊನೆಯ ಚಿತ್ರ ‘ಓಲ್ಡ್​ಮಾಂಕ್​’ ಸಿನಿಮಾ ಫೆ.25ರಂದು ಬಿಡುಗಡೆ ಆಗಲಿದೆ.

ರಾಜೇಶ್ ಅವರ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರ ಸ್ವಾಮಿ, ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
___

 

Be the first to comment

Leave a Reply

Your email address will not be published. Required fields are marked *

Translate »
error: Content is protected !!