ಸೀರಿಯಲ್ ನಟಿ ಆತ್ಮಹತ್ಯೆ ಸೀಕ್ರೆಟ್‌ ಬಹಿರಂಗ

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಜನಪ್ರಿಯ ಕಿರುತೆರೆ ನಟಿ ನಂದಿನಿ  ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸೀಕ್ರೆಟ್‌ ಬಹಿರಂಗ ಆಗಿದೆ.

ನಂದಿನಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರಿ ಕೆಲಸಕ್ಕೆ ಒತ್ತಾಯಿಸುತ್ತಿದ್ದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಳ್ಳಾರಿ ಜಿಲ್ಲೆ ಕೊಟ್ಟೂರಿನವರಾದ ನಂದಿನಿ, ಬೆಂಗಳೂರಿನಲ್ಲಿ ವಾಸವಿದ್ದರು. ನಂದಿನಿ ತಂದೆ ಸರ್ಕಾರಿ ಶಿಕ್ಷಕರಾಗಿದ್ದರು. ಮೂರು ವರ್ಷಗಳ ಹಿಂದೆ ಅವರು ನಿಧನರಾಗಿದ್ದರು. ತಂದೆಯ ಕೆಲಸವನ್ನು ಮಾಡುವಂತೆ ಕುಟುಂಬಸ್ಥರಿಂದ ಒತ್ತಾಯ ಇತ್ತು. ಆದರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲ.

‘ನಂದಿನಿ ಅವರು ಡೈರಿಯಲ್ಲಿ ಡೆತ್‌ನೋಟ್‌ ಬರೆದಿರುವುದು ಕಂಡು ಬಂದಿದೆ. ನನಗೆ ಸರಕಾರಿ ಕೆಲಸ ಇಷ್ಟವಿಲ್ಲ. ನಟನೆ ಬಗ್ಗೆ ಆಸಕ್ತಿಯಿದ್ದು, ಅದರಲ್ಲಿಯೇ ಮುಂದುವರಿಯಬೇಕು. ಆದರೆ ಮನೆಯವರು ಇದಕ್ಕೆ ಒಪ್ಪುತ್ತಿಲ್ಲ ಎಂದು ಬರೆದಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅಭಿನಯಿಸಿದ್ದರು. ಪ್ರಸ್ತುತ ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರದಲ್ಲಿ  ಅಭಿನಯಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಕನಕ ಹಾಗೂ ದುರ್ಗಾ ಎನ್ನುವ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!