ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ನಟ ಚರಿತ್ ಬಾಳಪ್ಪ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ.
ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಬಾಳಪ್ಪ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಚರಿತ್ ಬಾಳಪ್ಪ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಯುವತಿ ನೀಡಿದ ದೂರಿನ ಅನ್ವಯ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಚರಿತ್ ಬಾಳಪ್ಪ ಖ್ಯಾತಿ ಪಡೆದಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂಬಂಧ ಅಗತ್ಯ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.
Be the first to comment