ರಜನಿ ಸಿನಿಮಾದ ಅತಿಥಿ ಪಾತ್ರ ತಿರಸ್ಕರಿಸಿದ ಶಾರುಖ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ಶಾರುಖ್ ಖಾನ್ ಹೇಳಿದ್ದಾರೆ.

ಚಿತ್ರತಂಡ 5 ದಿನಗಳ ಶೂಟಿಂಗ್‌ಗಾಗಿ ಶಾರುಖ್ ಅವರನ್ನು ಸಂಪರ್ಕಿಸಿದ್ದರೂ ಅವರು ಅದಕ್ಕೆ ಒಪ್ಪಲಿಲ್ಲ ಎಂಬುದು ತಿಳಿದು ಬಂದಿದೆ. ಶಾರುಖ್ ಖಾನ್ ‘ಜೈಲರ್ 2’ನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಮೋಹನ್ ಲಾಲ್ ಅವರ ಕಾರ್ ಡ್ರೈವರ್ ಹಂಚಿಕೊಂಡಿದ್ದ ಎಐ ಚಿತ್ರ ಈ ಸುದ್ದಿಗೆ ಬಲ ನೀಡಿತ್ತು. ಆದರೆ ಈಗ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಈಗ ಶಾರುಖ್ ಖಾನ್ ‘ಕಿಂಗ್’ ಸಿನಿಮಾದ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಅದಕ್ಕಾಗಿ ತಮ್ಮ ಲುಕ್ ಬದಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಸಿನಿಮಾಕ್ಕಾಗಿ ಲುಕ್ ಬದಲಾಯಿಸುವುದು ಅಥವಾ ಅದೇ ಲುಕ್‌ನಲ್ಲಿ ಕಾಣಿಸಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ‘ಕಿಂಗ್’ ಸಿನಿಮಾ ಬಿಡುಗಡೆಯಾಗುವವರೆಗೆ ಬೇರೆ ಯಾವುದೇ ಚಿತ್ರಗಳಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಾರದು ಎಂಬುದು ಶಾರುಖ್ ಅವರ ಉದ್ದೇಶ ಎನ್ನಲಾಗಿದೆ.

ಈ ಹಿಂದೆ ಶಾರುಖ್ ಖಾನ್ ನಟಿಸಿ ನಿರ್ಮಿಸಿದ್ದ ‘ರಾ 1’ ಸಿನಿಮಾದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಪಾತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಈ ಹಿನ್ನೆಲೆ ‘ಜೈಲರ್ 2’ನಲ್ಲಿ ಶಾರುಖ್ ಖಾನ್ ನಟಿಸುವ ಮೂಲಕ ಆ ಋಣ ತೀರಿಸುತ್ತಾರೆ ಎಂಬ ನಿರೀಕ್ಷೆ ಇದ್ದರೂ, ಈಗ ಅದು ನೆರವೇರಿಲ್ಲ.

ಈ ಹಿಂದೆ ಶಾರುಖ್ ಖಾನ್ ನಟಿಸಿ ನಿರ್ಮಿಸಿದ್ದ ‘ರಾ 1’ ಸಿನಿಮಾದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಪಾತ್ರ ಮೆಚ್ಚುಗೆ ಪಡೆದಿತ್ತು. ‘ಜೈಲರ್ 2’ನಲ್ಲಿ ಶಾರುಖ್ ಖಾನ್ ನಟಿಸುವ ಮೂಲಕ ಆ ಋಣ ತೀರಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಈಗ ಸುಳ್ಳಾಗಿದೆ.

ಜೈಲರ್ 2 ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಜೂನ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ.

ಇದೇ ವೇಳೆ ಶಾರುಖ್ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಶಾರುಖ್ ಪುತ್ರಿ ಸುಹಾನಾ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಇದೇ ವರ್ಷ ಡಿಸೆಂಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!