sharan: ಎಲೆಕ್ಟ್ರಿಷಿಯನ್ ಆಗಿ ಬರಲಿದ್ದಾರೆ ಶರಣ್

ಶರಣ್ ಹೊಸ ಚಿತ್ರದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಶರಣ್ ಹುಟ್ಟುಹಬ್ಬವಾದ ಇಂದು ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಚಿತ್ರ ನಿರ್ದೇಶಿಸಿದ್ದ ಅರವಿಂದ್ ಕುಪ್ಲಿಕರ್ ಅವರು ಶರಣ್ ಮುಂದಿನ ಚಿತ್ರಕ್ಕೆ ನಿರ್ದೇಶಕ. ಡಾರ್ಕ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ನಿರ್ದೇಶನದ ಎರಡನೇ ಸಿನಿಮಾ ಇದಾಗಿದೆ.

ಶರಣ್ ಹೊಸ ಸಿನಿಮಾದ ಕಥೆ ಬಾಗಲಕೋಟೆಯಲ್ಲಿ ನಡೆಯಲಿದೆ. ಉತ್ತರ ಕರ್ನಾಟಕ ಶೈಲಿಯ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

ಈ ಚಿತ್ರದಲ್ಲಿ ಅಚ್ಯುತ್ ಕುಮಾರ್, ರಂಗಾಯಣ ರಘು ಮೊದಲಾದವರು ನಟಿಸಲಿದ್ದಾರೆ. ಫೆ.20ರಿಂದ ಚಿತ್ರೀಕರಣ ಆರಂಭವಾಗಲಿದೆ.

ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ರಿವೀಲ್ ಆಗಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಇರಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!