ಶರಣ್ ಜೊತೆ ಕೈ ಜೋಡಿಸಿದ ಧ್ರುವ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಶರಣ್ ನಟನೆಯ ಅವತಾರ ಪುರುಷ ಸಿನಿಮಾದ ಟ್ರೈಲರ್ ಲಾಂಚ್ ಮಾಡಲಿದ್ದಾರೆ. ಈ ಮೂಲಕ ಕನ್ನಡದ ಒಬ್ಬ ನಟನಿಗೆ ಮತ್ತೊಬ್ಬ ನಟ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಇದು ಇಬ್ಬರ ಅಭಿಮಾನಿಗಳಿಗೂ ಖುಷಿ ಕೊಟ್ಟಿದ್ದು, ಪ್ರಿ-ರಿಲೀಸ್ ಇವೆಂಟ್ ಬಗ್ಗೆ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಸಿನಿಮಾ ಮೇ 6ಕ್ಕೆ ರಾಜ್ಯಾದ್ಯಂತ ಥಿಯೇಟರ್‌ಗೆ ಲಗ್ಗೆ ಇಡುತ್ತಿದೆ. ಬರೋಬ್ಬರಿ 10 ಅವತಾರಗಳಲ್ಲಿ ಕಾಮಿಡಿ ಕಿಂಗ್ ಶರಣ್ ಕಾಣಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ‘ಅವತಾರ ಪುರುಷ’ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
ಅವತಾರ ಪುರುಷ’ ಸಿನಿಮಾವನ್ನು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದಾರೆ. ಸಿಂಪಲ್ ಸುನಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಸಿನಿಮಾದಲ್ಲಿ ಕಾಮಿಡಿ ಜೊತೆ ಜೊತೆ ಥ್ರಿಲ್ಲರ್ ಹಾಗೂ ಸಸ್ಪೆನ್ಸ್ ಎಲಿಮೆಂಟ್ಸ್ ಇದೆ.

‘ಅವತಾರ ಪುರುಷ’ ಈ ಹಿಂದೆ ರಿಲೀಸ್ ಆಗಬೇಕಿತ್ತು. ಹಾಸ್ಯದ ಜೊತೆ ಜೊತೆಗೆ ಮಾಟ-ಮಂತ್ರದ ಸನ್ನಿವೇಶಗಳು ಕುತೂಹಲ ಮೂಡಿಸಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ ಇದೇ ಮೇ 6ಕ್ಕೆ ರಿಲೀಸ್ ಆಗುತ್ತಿದೆ.

ಧ್ರುವ ಸರ್ಜಾ ಸಧ್ಯ ‘ಮಾರ್ಟಿನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಎಪಿ ಅರ್ಜುನ್ ಹಾಗೂ ಧ್ರುವ ಮತ್ತೆ ಜೊತೆಯಾಗಿ ಸಿನಿಮಾ ಮಾಡುತ್ತಿದ್ದು, ಇದು ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ. ಇದಲ್ಲದೇ ಜೋಗಿ ಪ್ರೇಮ್ ಜೊತೆಗೆ ಸಿನಿಮಾವನ್ನೂ ಒಪ್ಪಿಕೊಂಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಚಿತ್ರದ ಮುಹೂರ್ತ ನಡೆದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!