ಜೂ. 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ

ಕನ್ನಡದ  ನಟಿ ಶರ್ಮಿಳಾ ಮಾಂಡ್ರೆ   ಅವರ ವಿವಾಹ ನಿಶ್ಚಿತಾರ್ಥ ಜೂನ್ 25ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ.

ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ದ ನಿರ್ಮಾಪಕ ಆಗಿದ್ದಾರೆ. ಇವರು ಇತ್ತೀಚೆಗೆ ಸೂಪರ್ ಹಿಟ್ ಆದ ತಮಿಳು ಸಿನಿಮಾ ‘ತಾಕ್ ಕಿಳವಿ’  ಸಹ ನಿರ್ಮಾಪಕರಾಗಿದ್ದಾರೆ.

2007 ರಲ್ಲಿ ಬಿಡುಗಡೆ ಆದ ‘ಸಜನಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ಶರ್ಮಿಳಾ ಮಾಂಡ್ರೆ  ಹಲವು ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನ ‘ಅದೃಷ್ಟಶಾಲಿ’ ಮತ್ತು ‘ದಸರಾ’  ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಶರ್ಮಿಳಾ ಮಾಂಡ್ರೆ  ನಿರ್ಮಾಪಕಿಯೂ ಆಗಿದ್ದು ತಮಿಳಿನಲ್ಲಿ ನಾಲ್ಕು ಸಿನಿಮಾ ನಿರ್ಮಿಸಿದ್ದಾರೆ. ಕನ್ನಡದಲ್ಲಿ ‘ದಸರಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ‘ಕಾದಲ್ ಕೊಂಜಂ ತೂಕಲಾ’ ಹೆಸರಿನ ತಮಿಳು ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ.

ಶರ್ಮಿಳಾ ಮಾಂಡ್ರೆ ಅವರ ಮದುವೆ ಇದೇ ವರ್ಷದಲ್ಲಿ ನೆರವೇರಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!