ಶರ್ಮಿಳಾ ಮಾಂಡ್ರೆ ಈಗ ಕ್ರಿಯೇಟಿವ್ ಪ್ರೊಡ್ಯೂಸರ್

ಅನೇಕ ಯಶಸ್ವಿ ಚಿತ್ರಗಳಲ್ಲಿ ನಟಿಸಿರುವ ನಟಿ ಶರ್ಮಿಳಾ ಮಾಂಡ್ರೆ ಈಗ  “ಸಿಲ ನೋಡಿಗಳಿಲ್” ತಮಿಳು ಚಿತ್ರದ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿದ್ದಾರೆ.

ಮಲೇಷಿಯಾ ಮೂಲದ ಪುನ್ನಗೈ ಪೂ ಗೀತಾ ನಿರ್ಮಾಣದ ಈ ಚಿತ್ರದ ಸಂಪೂರ್ಣ ಜವಾಬ್ದಾರಿ ಶರ್ಮಿಳಾ ಮಾಂಡ್ರೆ ಹೊತ್ತಿಕೊಂಡಿದ್ದಾರೆ‌.  “ಮುಂದಿನ ನಿಲ್ದಾಣ” ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ಭಾರದ್ವಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

 “ಪುನ್ನಗೈ” ಪೂ ಗೀತಾ ಈ ಚಿತ್ರವನ್ನು ನಿರ್ಮಾಣ ಮಾಡಿ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ಮೂರು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ರಿಚರ್ಡ್ ರಿಷಿ, ಪುನ್ನಗೈ ಪೂ ಗೀತಾ ಹಾಗೂ ಯಶಿಕಾ ಆನಂದ್ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.

ಲಂಡನ್ ನಲ್ಲಿ ವಾಸವಿರುವ ಗಂಡ – ಹೆಂಡತಿ ನಡುವೆ ಮತ್ತೊಬ್ಬ ಯುವತಿಯ ಆಗಮನವಾಗುತ್ತದೆ. ಅಲ್ಲೊಂದು ಕೊಲೆ ಕೂಡ ಆಗುತ್ತದೆ. ಈ ಕೊಲೆ ಮಾಡಿದ್ದು ಯಾರು? ಇದು ನಿಜವಾಗಿಯೂ ಕೊಲೆನಾ? ಎಂಬ ಕುತೂಹಲಕಾರಿ ಅಂಶಗಳು  ಚಿತ್ರದಲ್ಲಿದೆ.

ಐದು ಹಾಡುಗಳು ಈ ಚಿತ್ರದಲ್ಲಿದ್ದು, ಐದು ಖ್ಯಾತ ಸಂಗೀತ ನಿರ್ದೇಶಕರು ಸಂಗೀತ ಸಂಯೋಜನೆ ಮಾಡಿದ್ದಾರೆ.  ಮೊದಲು ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಂತರದ ದಿನಗಳಲ್ಲಿ ಕನ್ನಡದಲ್ಲಿಯೂ ನಿರ್ಮಿಸುವ ಯೋಜನೆ ಇದೆ ಎಂದು ಹೇಳಲಾಗಿದೆ.

ನವೆಂಬರ್ 24 ರಂದು ಪ್ರಪಂಚದಾದ್ಯಂತ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ನಟಿ ಶರ್ಮಿಳಾ ಮಾಂಡ್ರೆ ತಿಳಿಸಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!