ಶಿಲ್ಪಾ ಶೆಟ್ಟಿ ಪತಿ ಕುಂದ್ರಾ ಬಂಧನ

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಆಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

“ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ ಕುಂದ್ರಾ ಅವರನ್ನು ಈ ಪ್ರಕರಣದಲ್ಲಿ ಸೋಮವಾರ ಬಂಧಿಸಲಾಗಿದೆ. ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ” ಎಂದು ಮುಂಬೈ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಕರೆದೊಯ್ಯಲಾಗಿದೆ. ದಕ್ಷಿಣ ಮುಂಬೈಯ ಜೆ ಜೆ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವರು ಪ್ರಕರಣದಲ್ಲಿ ಭಾಗಿ ಆಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!