ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎನ್ನುವವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.
ಕಿರುಚಿತ್ರಗಳು ಮತ್ತು ವೆಬ್ ಸೀರೀಸ್ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ನಟಿಯರಿಗೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿಯೊಬ್ಬರು ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಬೊಂಬ್ಲೆ ಆರೋಪಿಗಳಲ್ಲಿ ಒಬ್ಬರು ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಆ್ಯಪ್ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಲಾಗಿದೆ. ಈ ಬಗ್ಗೆ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ವಿಚಾರಣೆ ಮುಂದುವರೆದಿದೆ.
ರಾಜ್ ಕುಂದ್ರಾ ಬಂಧನದ ಬಳಿಕ ಇದುವರೆಗೆ ಅಶ್ಲೀಲ ಚಿತ್ರ ತಯಾರಿ ಪ್ರಕರಣ ಸಂಬಂಧ 11 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ ಆಗಸ್ಟ್ 20ರವರೆಗೆ ಜಾಮೀನು ನಿರಾಕರಣೆ ಮಾಡಲಾಗಿದೆ.
___________

Be the first to comment