Shilpa Shetty: ʻಕೆಡಿ’ ಸಿನಿಮಾಗಾಗಿ ಬೆಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

ಧ್ರುವ ಸರ್ಜಾ ಹಾಗೂ ಪ್ರೇಮ್‌ ಕಾಂಬಿನೇಶನ್‌ ನ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದು, ಅವರು ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿದ್ದಾರೆ.

ಶಿಲ್ಪಾ ಶೆಟ್ಟಿ ಏಪ್ರಿಲ್‌ 4ರಂದು ತಮ್ಮ ಬೆಂಗಳೂರು ಡೈರೀಸ್‌ನಿಂದ ಒಂದು ನೋಟ ಎಂದು ಇನ್‌ಸ್ಟಾದಲ್ಲಿ ಸೆಲ್ಫಿ ಹಂಚಿಕೊಂಡಿದ್ದಾರೆ. ನಟಿ ತಮ್ಮ ಗೂಫಿ ಎಕ್‌ಪ್ರೆಷನ್‌ ನೀಡಿದ್ದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಶಿಲ್ಪಾ ಶೆಟ್ಟಿ ಕಪ್ಪು ಟಿ-ಶರ್ಟ್ ನ್ನು ಧರಿಸಿದ್ದು, ಅದರ ಮೇಲೆ, “ಮೈ ಏರ್ಪೋರ್ಟ್ ಲುಕ್” ಎಂದು ಬರೆದಿದೆ.

ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿಯಲ್ಲಿ ಸತ್ಯವತಿ ಪಾತ್ರದಲ್ಲಿ ಶಿಲ್ಪಾ ಕಾಣಿಸಿಕೊಳ್ಳುತ್ತಿದ್ದಾರೆ.

ಯುಗಾದಿ ಹಬ್ಬದಂದು ಚಿತ್ರತಂಡ ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು. ಶಿಲ್ಪಾ ಶೆಟ್ಟಿ ತಮ್ಮ ಪೋಸ್ಟರನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದರು.

ಈ ಚಿತ್ರದಲ್ಲಿ ರವಿಚಂದ್ರನ್ ಮತ್ತು ಸಂಜಯ್ ದತ್ ಸಹ ನಟಿಸಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ.

‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.


——

Be the first to comment

Leave a Reply

Your email address will not be published. Required fields are marked *

Translate »
error: Content is protected !!