shine shetty: ಬೀದಿ ನಾಯಿಗೆ ಚಿಕಿತ್ಸೆ ಕೊಡಿಸಿದ ಶೈನ್ ಶೆಟ್ಟಿ

ವಾಹನ ಡಿಕ್ಕಿ ಹೊಡೆದು ನರಳಾಡುತ್ತಿದ್ದ ಬೀದಿ ನಾಯಿಗೆ ನಟ ಶೈನ್ ಶೆಟ್ಟಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

ಶೈನ್ ಶೆಟ್ಟಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಅಪರಿಚಿತ ವಾಹನವೊಂದು ಬೀದಿ ನಾಯಿಗೆ ಹೊಡೆದು ನಾಯಿಯ ಕಾಲು, ಕುತ್ತಿಗೆ ಹಾಗೂ ದೇಹಕ್ಕೆ ತೀವ್ರ ಗಾಯವಾಗಿ ರಕ್ತಸ್ರಾವದಿಂದ ನರಳಾಡುತ್ತಿತ್ತು.

ಶೈನ್ ಶೆಟ್ಟಿ ಬೀದಿನಾಯಿಯನ್ನ ಬಣಕಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಬಳಿಕ ಆ ನಾಯಿ ಎಲ್ಲಿ ಅಪಘಾತಕ್ಕೀಡಾಗಿ ಬಿದ್ದಿತ್ತೋ ಅಲ್ಲಿಗೆ ಬಿಟ್ಟಿದ್ದಾರೆ.

ಬಣಕಲ್ ಪಶು ಆಸ್ಪತ್ರೆಯ ವೈದ್ಯ ಅಜೀಜ್ ಅಹಮದ್ ಅವರಿಗೆ ಶೈನ್ ಶೆಟ್ಟಿ ಕರೆ ಮಾಡಿದ್ದಾರೆ. ಕೆಲಸ ನಿಮಿತ್ತ ಹಳ್ಳಿಗೆ ಹೋಗಿದ್ದ ಅಜೀಜ್ ಅಹಮದ್ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡಿದರು.

ವಾಹನಗಳನ್ನ ಓಡಿಸುವಾಗ ನೋಡಿಕೊಂಡು ಓಡಿಸಿ. ಅಚಾನಕ್ಕಾಗಿ ಅಡ್ಡ ಬಂದರೆ ಏನೂ ಮಾಡಲು ಆಗಲ್ಲ. ಆದರೆ, ನೋಡಿ ವಾಹನ ಚಾಲನೆ ಮಾಡಿ. ಒಂದು ವೇಳೆ ಅಪಘಾತವಾಯಿತು ಎಂದರೆ ಕೂಡಲೇ ಕೆಳಗಡೆ ಇಳಿದು ಪ್ರಾಣಿಯ ಪರಿಸ್ಥಿತಿ ನೋಡಿ. ಚಿಕಿತ್ಸೆ ಕೊಡಿಸಿದರೆ ಬದುಕುತ್ತೆ ಎಂದರೆ ಚಿಕಿತ್ಸೆ ಕೊಡಿಸಿ. ಒಂದು ಜೀವ ಉಳಿಯುತ್ತದೆ ಎಂದು ವಾಹನ ಸವಾರರಲ್ಲಿ ಶೈನ್‌ ಶೆಟ್ಟಿ ಅವರು ಮನವಿ ಮಾಡಿದ್ದಾರೆ.

ಶೈನ್‌ ಶೆಟ್ಟಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
——

Be the first to comment

Leave a Reply

Your email address will not be published. Required fields are marked *

Translate »
error: Content is protected !!