ಡಾ. ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143″ದ ಜಬರ್ದಸ್ತ್ 4ಕೆ ಟ್ರೈಲರ್ ಬಿಡುಗಡೆ ಆಗಿದೆ.
ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಆಕ್ಷನ್ ಗಮನ ಸೆಳೆಯುತ್ತಿದೆ. ಈ ಚಿತ್ರ ಆಗಸ್ಟ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ಗಮನ ಸೆಳೆದಿವೆ. ನಾಯಕನ ಪರಿಚಯಿಸುವ ಟೀಸರ್ ಮೆಚ್ಚುಗೆ ಪಡೆದಿದೆ.
ಇದು ರೌಡಿಸಂ ಸಿನಿಮಾ ಅಲ್ಲ. ವಿಭಿನ್ನ ಪ್ರೇಮಕಥೆಯ ಚಿತ್ರ. ಜಯಣ್ಣ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ಹಾಗೂ ಧೀರನ್ ಅವರ ಕುಟುಂಬದವರು ಕುಳಿತು ಧೀರನ್ ಅವರಿಗೆ ಇಂತಹುದೇ ಕಥೆ ಇದ್ದರೆ ಚೆನ್ನ ಎಂದು ತಿರ್ಮಾನಿಸಿದ್ದರು. ನಾಯಕಿ ಮಾನ್ವಿತ ಕಾಮತ್, ಚರಣ್ ರಾಜ್ ಅವರ ಅಭಿನಯ ತುಂಬಾ ಚೆನ್ನಾಗಿದೆ. ಸಾಧುಕೋಕಿಲ, ಚಿಕ್ಕಣ್ಣ ಅವರ ಕಾಮಿಡಿ ಮೋಡಿ ಮಾಡಲಿದೆ ಎಂದು ನಿರ್ದೇಶಕ ಅನಿಲ್ ಕುಮಾರ್ ಹೇಳಿದ್ದಾರೆ.
ನಾನು ನಮ್ಮ ಕುಟುಂಬದವರ ಬಳಿ ಈ ಸಿನಿಮಾ ಕಥೆ ಬಗ್ಗೆ ಚರ್ಚಿಸಿದಾಗ ನಿನಗೆ ಸರಿ ಹೊಂದುವುದಾದರೆ ಮಾಡು ಎಂದರು. ನನಗೂ ಈ ಕಥೆ ಇಷ್ಟವಾಗಿತ್ತು. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಕೊರೋನ ಕಾರಣದಿಂದ ಚಿತ್ರ ಬಿಡುಗಡೆ ತಡವಾಗಿದೆ ಎಂದು ಧೀರನ್ ಹೇಳಿದ್ದಾರೆ.
ಛಾಯಾಗ್ರಹಣ ಶಿವ ಅವರದ್ದು. ಜಯಣ್ಣ, ಭೋಗೇಂದ್ರ, ಡಾ.ಸೂರಿ ನಿರ್ಮಿಸಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
___
https://youtu.be/jAnzNnWbGh8

Be the first to comment