ಶಿವಣ್ಣ- ಡಾಲಿ

ಮತ್ತೆ ಒಂದಾದ ಶಿವಣ್ಣ- ಡಾಲಿ

ಟಗರು ಸಿನಿಮಾದ ಶಿವಣ್ಣ-ಡಾಲಿ  ಜೋಡಿ  ‘666 ಆಪರೇಷನ್ ಡ್ರೀಮ್ ಥಿಯೇಟರ್’ ಮೂಲಕ ಮತ್ತೊಮ್ಮೆ ಒಂದಾಗಿದೆ.

‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’,   ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳ   ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ನಿರ್ದೇಶಕ ಹೇಮಂತ್ ಎಂ ರಾವ್  ಅವರ ಮುಂದಿನ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ದಲ್ಲಿ ಈ ಜೋಡಿ ಮತ್ತೆ ಒಂದಾಗಿರುವುದು ನಿರೀಕ್ಷೆ ಹೆಚ್ಚಿಸಿದೆ.

ಈ ಚಿತ್ರ  ಡಾ. ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿದೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಚರಣ್ ರಾಜ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ,  ವಿಶ್ವಾಸ್ ಕಾಶ್ಯಪ್ ಕಲಾ ನಿರ್ದೇಶನವನ್ನು ನಿರ್ವಹಿಸುತ್ತಿದ್ದಾರೆ.‌

ಡಾಲಿ ಧನಂಜಯ್ ಅಭಿನಯದಲ್ಲಿ ಮೂಡಿಬರಲಿರುವ ಈ ಚಿತ್ರದಲ್ಲಿ  70ರ ದಶಕದ ಶೈಲಿ  ವೈಶಿಷ್ಟ್ಯತೆಯಾಗಿದೆ.  ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರ ಶಕ್ತಿಯುತ ಪಾತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಸಂಚಲನ ಮೂಡಿಸಲಿದೆ ಎಂದು ಹೇಳಲಾಗಿದೆ. ಯಾವ ರೀತಿ ಈ ಚಿತ್ರ ಪ್ರೇಕ್ಷಕರನ್ನು ಮೋಡಿ ಮಾಡಲಿದೆ ಎಂದು ಕಾದು ನೋಡಬೇಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!