ಶಿವರಾಜ್ಕುಮಾರ್ ನಟನೆಯ 124ನೇ ಚಿತ್ರಕ್ಕೆ ಮೆಹ್ರೀನ್ ಪೀರ್ಜಾದಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಈಗಾಗಲೇ ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಮೆಹ್ರೀನ್ ಹೆಸರು ಮಾಡಿದ್ದಾರೆ. ಶಿವಣ್ಣ ಜೊತೆಗೆ ಅಭಿನಯಿಸುವ ಮೂಲಕ ಈಗ ಅವರು ಸ್ಯಾಂಡಲ್ವುಡ್ಗೆ ಕಾಲಿಡುತ್ತಿದ್ದಾರೆ.
ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಚಿತ್ರ ನಿರ್ಮಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಅವರ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ. ಈ ಚಿತ್ರದ ಶೂಟಿಂಗ್ ಆಗಸ್ಟ್ನಲ್ಲಿ ಆರಂಭವಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.
70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿದೆ.
ರವಿಕುಮಾರ್ ಸನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ರಾಬರ್ಟ್ ಚಿತ್ರದ ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಜನಪ್ರಿಯತೆ ಗಳಿಸಿದ ಗಾಯಕಿ ಮಂಗ್ಲಿ ಅವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.
ಮೆಹ್ರೀನ್ ಕೆಲ ತಿಂಗಳ ಹಿಂದೆ ರಾಜಕಾರಣಿ ಭವ್ಯ ಭಿಷ್ಣೋಯ್ ಜತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಆದರೆ ಬಳಿಕ ಇಬ್ಬರೂ ಮದುವೆ ಆಗುತ್ತಿಲ್ಲ ಎಂದು ಹೇಳಿದ್ದರು.

____________





Be the first to comment