ಧ್ರುವ ಸರ್ಜಾ ಅಭಿನಯದ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದ ತಾರಾ ಬಳಗಕ್ಕೆ ನಟ ಶಿವರಾಜಕುಮಾರ್ ಸೇರ್ಪಡೆಗೊಂಡಿದ್ದು ನಿರೀಕ್ಷೆ ಹುಟ್ಟುಹಾಕಿದೆ.
ಶಿವರಾಜಕುಮಾರ್ ಅವರು ಕೆಡಿ: ಭಾಗ 1 ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಅವರ ಪಾತ್ರ ಮುಂದಿನ ಕೆಡಿ: 2 ರಲ್ಲಿ ಪ್ರಮುಖ ಪಾತ್ರವಾಗಿರಲಿದೆ ಎಂದು ಹೇಳಲಾಗಿದೆ.
ನಿರ್ದೇಶಕ ಪ್ರೇಮ್ ಅವರು ಶಸ್ತ್ರಚಿಕಿತ್ಸೆಯ ನಂತರ ಶಿವಣ್ಣರನ್ನು ಸೆಟ್‌ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಣ್ಣ ಇತ್ತೀಚೆಗಷ್ಟೇ ಮಿಯಾಮಿಯಲ್ಲಿ ಚಿಕಿತ್ಸೆ ಪಡೆದು ಹಿಂತಿರುಗಿ ಸದ್ಯ ಮನೆಯಲ್ಲೇ ಸುಧಾರಿಸಿಕೊಳ್ಳುತ್ತಿದ್ದಾರೆ. ಶಿವಣ್ಣ ಮುಂದಿನ ವಾರ ಚಿತ್ರೀಕರಣ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ.
ರವಿಚಂದ್ರನ್ ಮತ್ತು ರಮೇಶ್ ಅರವಿಂದ್ ಕೂಡ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ನಿರ್ಣಾಯಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಕೆಡಿ ಮೂಲಕ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಸಂಜಯ್ ದತ್ ಕೂಡ ಈ ಚಿತ್ರದ ಮೂಲಕ ಕನ್ನಡಕ್ಕೆ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.
‘ಕೆಡಿ – ದಿ ಡೆವಿಲ್’ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮತ್ತು ಶ್ರೀನಿವಾಸ್ ಪಿ. ಪ್ರಭು ಸಂಕಲನವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರ ಸದ್ಯ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದೆ.

Be the first to comment