ವಿಜಯ್ ರಾಘವೇಂದ್ರ ಅಭಿನಯದ ಬಹುನಿರೀಕ್ಷಿತ ‘ಮಹಾನ್’ ಚಿತ್ರದಲ್ಲಿ ಶಿವರಾಜ್‌ಕುಮಾರ್ ವಕೀಲರ ಪಾತ್ರದಲ್ಲಿ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
‘ಆಕಾಶ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಪಿ.ಸಿ. ಶೇಖರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರು ವಕೀಲರ ಪಾತ್ರದಲ್ಲಿ ಅಭಿನಯಿಸಿದ ಸುದ್ದಿ ಹೊರಬಿದ್ದ ಬೆನ್ನಲ್ಲೇ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
ಹಲವು ವರ್ಷಗಳ ಬಳಿಕ ಶಿವರಾಜ್‌ಕುಮಾರ್ ಹಾಗೂ ವಿಜಯ್ ರಾಘವೇಂದ್ರ ಒಂದೇ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದೆ ‘ಭೈರತಿ ರಣಗಲ್’ ಚಿತ್ರದಲ್ಲಿ ಶಿವರಾಜ್‌ಕುಮಾರ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಕಪ್ಪು ಕೋಟು ಧರಿಸಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.
‘ರೈತರ ಬದುಕು ಮತ್ತು ಸಮಾಜದ ಮಹತ್ವದ ವಿಚಾರಗಳನ್ನು ಆಧರಿಸಿದ ಕಥಾಹಂದರ ಹೊಂದಿರುವ ‘ಮಹಾನ್’ ಚಿತ್ರದಲ್ಲಿ ಪ್ರತಿಯೊಂದು ಪಾತ್ರಕ್ಕೂ ವಿಶೇಷ ಮಹತ್ವವಿದೆ. ಮನೆಯಲ್ಲಿ ತಪ್ಪು ಮಾಡಿದಾಗ ತಿದ್ದಲು ತಂದೆ-ತಾಯಿ ಇರುವಂತೆ ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಅದನ್ನು ಸರಿಪಡಿಸಲು ಒಬ್ಬ ಮಹಾನ್ ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ ಪ್ರಭಾವಶಾಲಿ ಪಾತ್ರವನ್ನು ಶಿವರಾಜ್‌ಕುಮಾರ್ ಅವರು ನಿರ್ವಹಿಸಿದ್ದಾರೆ ಎಂದು ನಿರ್ದೇಶಕ ಪಿ.ಸಿ. ಶೇಖರ್ ತಿಳಿಸಿದ್ದಾರೆ.
—





Be the first to comment