ಶಿವಣ್ಣಗೆ ಪವನ್ ಒಡೆಯರ್ ಆಕ್ಷನ್ ಕಟ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ‘ಗೂಗ್ಲಿ’ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.

‘ಡೊಳ್ಳು’ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿರುವ ಪವನ್ ಒಡೆಯರ್ ಅವರು ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ.  ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿರುವುದು ವಿಶೇಷವಾಗಿದೆ.

‘2025 ಕ್ಕೆ ಶಿವರಾಜ್ ಕುಮಾರ್ ಸಿನಿಮಾ ಸೆಟ್ಟೇರಲಿದೆ. ಪ್ರತಿಯೊಬ್ಬ ನಿರ್ದೇಶಕರಿಗೆ ಶಿವರಾಜ್ ಕುಮಾರ್ ಅವರಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ಈಗ ಆ ಕನಸು ನನಸಾಗುತ್ತಿದೆ. ಈ ಚಿತ್ರ ಥ್ರಿಲ್ಲರ್ ಜೊತೆಗೆ ಕಮರ್ಷಿಯಲ್ ಎಂಟರ್ ಟೈನರ್ ಆಗಿದೆ. ಚಿತ್ರದಲ್ಲಿ ಶಿವರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ಶಿವರಾಜ್ ಕುಮಾರ್ ಆರೋಗ್ಯದ ಸಮಸ್ಯೆಯ ಕಾರಣದಿಂದ ಸದ್ಯ ಚಿತ್ರಿಕರಣದಿಂದ ಬಿಡುವು ಪಡೆದುಕೊಂಡಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದ ಬಳಿಕ ಅವರು ಭೈರವನ ಕೊನೆ ಪಾಠ, #131, ಎ ಫಾರ್ ಆನಂದ್, ಉತ್ತರಕಾಂಡ ಸೇರಿದಂತೆ ಹಲವು ಚಿತ್ರಗಳ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!