ರಾಮ್ ಚರಣ್ ಮುಂದಿನ ಚಿತ್ರದಲ್ಲಿ ಶಿವಣ್ಣ

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ 62ನೇ ಹುಟ್ಟುಹಬ್ಬದ  ಸಂದರ್ಭದಲ್ಲಿ ಅವರ ಅನೇಕ ಹೊಸ ಸಿನಿಮಾಗಳು ಘೋಷಣೆ ಆಗಿವೆ.

ಕಾಲಿವುಡ್ ನಲ್ಲಿ ಯಶಸ್ವಿಯಾಗಿರುವ ಕರುನಾಡ ಚಕ್ರವರ್ತಿ ಇದೀಗ ತೆಲುಗು ಚಿತ್ರರಂಗವನ್ನು ಪ್ರವೇಶಿಸುತ್ತಿರುವುದು ಕನ್ಫರ್ಮ್ ಆಗಿದೆ. ಆರ್ ಆರ್ ಆರ್ ಖ್ಯಾತಿಯ ರಾಮ್ ಚರಣ್ ಅವರ 16ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ.

ಉಪನ್ನ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ ಇನ್ನೂ ಹೆಸರಿಡದ RC 16″ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿರುವುದು ಪಕ್ಕಾ ಆಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಚಿತ್ರ ತಯಾರಿಕ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಮಾಹಿತಿ ಹಂಚಿಕೊಂಡಿದ್ದು, ಶಿವಣ್ಣನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಈ ಚಿತ್ರವನ್ನು ವೃದ್ಧಿ ಸಿನಿಮಾಸ್, ಸುಕುಮಾರ್ ರೈಟಿಂಗ್ಸ್ ಮತ್ತು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ್ದು, ಸಂಗೀತ ಮಾಂತ್ರಿಕ ಎ.ಆರ್ . ರೆಹಮಾನ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ವೆಂಕಟ ಸತೀಶ್ ಕಿಲಾರು ನಿರ್ಮಾಣದ ಈ ಚಿತ್ರಕ್ಕೆ ಸನಾ ಅವರದೇ ಚಿತ್ರಕಥೆ ಇದೆ.

ಸೂಪರ್ ಸ್ಟಾರ್ ರಜನಿಕಾಂತ್, ಧನುಷ್ ಜೊತೆಗೆ   ಕಾಲಿವುಡ್ ನಲ್ಲಿ ಯಶಸ್ವಿಯಾಗಿರುವ ಶಿವಣ್ಣ ತೆಲುಗು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!