ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಮತ್ತೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಲಿದ್ದಾರೆ.
ಸೆಪ್ಟೆಂಬರ್ 3 ರಂದು ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಪವನ್ ಒಡೆಯರ್ , ಶಿವಣ್ಣ ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಪವನ್ ಈ ಹಿಂದೆ ನಟ ಪುನೀತ್ ರಾಜ್‌ಕುಮಾರ್ ಜೊತೆಗೆ ಎರಡು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು.
ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ. ಬೆಂಗಳೂರು, ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ, ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.
ಚಿತ್ರದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮತ್ತು ಪ್ರಕಾಶ್ ಬೆಳವಾಡಿ ನಟಿಸುತ್ತಿದ್ದಾರೆ. ಶಿವಣ್ಣನಿಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಲಿದ್ದಾರೆ. ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ನಟಿಸಲಿದ್ದಾರೆ.
ದೊಡ್ಡ ಮಟ್ಟದಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರವು ಆ್ಯಕ್ಷನ್, ಡ್ರಾಮಾ ಮತ್ತು ಭಾವನೆಗಳಿಂದ ತುಂಬಿದ ಕಮರ್ಷಿಯಲ್ ಎಂಟರ್‌ಟೈನರ್ ಆಗಿ ಮೂಡಿಬರಲಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದರೆ, ಶಶಾಂಕ್ ನಾರಾಯಣ್ ಸಂಕಲನ ನಿರ್ವಹಿಸಲಿದ್ದಾರೆ.
—-





Be the first to comment