‘ಪೆದ್ದಿ’ಯಲ್ಲಿ ಶಿವಣ್ಣ ಗೌರ್​​​ನಾಯ್ಡು ಅವತಾರ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ಯಲ್ಲಿ ಶಿವಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು  ಅವರ ಗೆಟಪ್ ರಿಲೀಸ್ ಆಗಿದೆ.

‘ಪೆದ್ದಿ’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗಲಿದೆ. ಸಿನಿಮಾದಲ್ಲಿ ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮೇಕಿಂಗ್ ವಿಡಿಯೋದಲ್ಲಿ ಶಿವಣ್ಣ-ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಇವರಿಬ್ಬರನ್ನು ನೋಡಿ ಥ್ರಿಲ್ ಆಗಿದ್ದಾರೆ. 

ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.  ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ.  ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ʻವೃದ್ಧಿ ಸಿನಿಮಾಸ್ʼ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ‘ಪೆದ್ದಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ʻಮೈತ್ರಿ ಮೂವೀ ಮೇಕರ್ಸ್ʼ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ.  ಸಿನಿಮಾಗೆ ಎ.ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಆರ್ ರತ್ನವೇಲು ಛಾಯಾಗ್ರಹಣ, ನವೀಲ್ ನೂಲಿ ಸಂಕಲನ‌ ಚಿತ್ರಕ್ಕಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!