ರಾಕ್ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ. 47” ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ.
ಚಿತ್ರದಲ್ಲಿ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ.
ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಸಿನಿ ದಿಗ್ಗಜರ ಕಾಂಬಿನೇಶನ್ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಮಾಸಕ್ತರು ಕಾತುರದಿಂದ ಎದುರು ನೋಡುತ್ತಿದ್ದಾರೆ.
ಗಾಳಿಪಟ 2 ಚಿತ್ರದ ಯಶಸ್ಸಿನಲ್ಲಿ ಇರುವ ಯೋಗರಾಜ್ ಭಟ್ ಈ ಚಿತ್ರದಲ್ಲೂ ಮೋಡಿ ಮಾಡಲು ಹೊರಟಿದ್ದಾರೆ.
____

Be the first to comment