ಮಾ.20ರಂದು ಸೆಟ್ಟೇರಲಿದೆ ಶಿವಣ್ಣ, ರಾಮ್ ಚರಣ್ ಚಿತ್ರ!

ತೆಲುಗಿನ ರಾಮ್ ಚರಣ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರ ಇದೇ ಮಾರ್ಚ್ 20ರಂದು ಸೆಟ್ಟೇರಲಿದೆ.

ಶಿವರಾಜ್ ಕುಮಾರ್ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ಶಿವಣ್ಣ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ.

ರಾಮ್ ಚರಣ್ ಹಾಗೂ ಶಿವಣ್ಣ ಕಾಂಬಿನೇಷನ್ ನ ಸಿನಿಮಾಗೆ ‘ಪೆದ್ದಿ’ ಎಂದು ಹೆಸರಿಡಲಾಗಿದೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ.  ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

”ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ” ಎಂದು ಶಿವಣ್ಣ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಚಿತ್ರದಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ  ಜಾನ್ವಿ ಕಪೂರ್ ನಟಿಸಲಿದ್ದಾರೆ. ಈ ಮೊದಲು  ಶ್ರೀಲೀಲಾಗೆ ಮಣೆ ಹಾಕಲಾಗಿತ್ತು. ಆದರೆ ರಾಮ್ ಚರಣ್ ಜೊತೆ ಜಾನ್ವಿ ನಟಿಸೋದು ಪಕ್ಕ ಆಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!