ಚಿಕಿತ್ಸೆಗಾಗಿ ವಿದೇಶಕ್ಕೆ ಹೊರಟ ಶಿವಣ್ಣ

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಡಿಸೆಂಬರ್​ 18ರಂದು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಅದಕ್ಕೂ ಮುನ್ನ ಸುದೀಪ್, ವಿನೋಜ್ ರಾಜ್ ಸೇರಿದಂತೆ ಹಲವರನ್ನು ಭೇಟಿಯಾದರು.  ಶಿವರಾಜ್ ಕುಮಾರ್ ಮನೆಯಿಂದ ವಿಮಾನ ನಿಲ್ದಾಣಕ್ಕೆ ತೆರಳುವಾಗ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಶಿವಣ್ಣ ಭಾವುಕರಾದರು.

‘ನಾನು ಆತ್ಮವಿಶ್ವಾಸದಿಂದ ಇದ್ದೇನೆ. ಡಿಸೆಂಬರ್​ 24ರಂದು ಸರ್ಜರಿ ನಡೆಯುತ್ತದೆ. ಅದರ ಬಗ್ಗೆ ಏನೂ ಯೋಚನೆ ಇಲ್ಲ.  ಆದರೆ 35 ದಿನ ಮನೆಯಿಂದ, ಭಾರತದಿಂದ ಹೊರಗೆ ಇರುತ್ತೇನೆ ಎಂಬ ನೋವು ಇರುತ್ತದೆ.  ಅಭಿಮಾನಿಗಳು, ಮಾಧ್ಯಮದವರು ಕಾಳಜಿ ತೋರಿಸಿದ್ದಾರೆ. ಆರೋಗ್ಯ ಸಮಸ್ಯೆ ಇದೆ ಎಂಬುದು ಗೊತ್ತಿದ್ದರೂ ಕೂಡ ಯಾರೂ ಅದನ್ನು ವೈಭವಿಕರಿಸಿಲ್ಲ. ಅದು ನನಗೆ ಖುಷಿ ಕೊಟ್ಟಿದೆ. ಅಷ್ಟು ಪ್ರೀತಿ ಮತ್ತು ಗೌರವ ನನ್ನ ಮೇಲೆ ಇಟ್ಟಿದ್ದಾರೆ. ಎಲ್ಲರ ಹಾರೈಕೆ ಇದೆ’ ಎಂದು ಶಿವರಾಜ್​ಕುಮಾರ್​ ಭಾವುಕರಾದರು.

‘ಇಲ್ಲಿ ಪರೀಕ್ಷೆ ಮಾಡಿಸಿದಾಗ ಎಲ್ಲ ಲಕ್ಷಣಗಳು ಚೆನ್ನಾಗಿವೆ. ಆದರೂ ಕೂಡ ಒಂದು ಆತಂಕ ಇದ್ದೇ ಇರುತ್ತದೆ. ಮನೆಯಿಂದ ಹೋಗುತ್ತಿದ್ದೇವಲ್ಲ? ತಂಗಿ ಹಾಗೂ ಸಂಬಂಧಿಕರನ್ನೆಲ್ಲ ನೋಡುವಾಗ ಸ್ವಲ್ಪ ಎಮೋಷನಲ್ ಆಯಿತು. ಅಭಿಮಾನಿಗಳು ಕೂಡ ಇದ್ದಾರೆ. ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ’ ಎಂದು  ಹೇಳಿದ್ದಾರೆ.

ಶಿವರಾಜ್ ಕುಮಾರ್   ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದ ಬಳಿಕ ಅವರು ಭೈರವನ ಕೊನೆ ಪಾಠ, #131, ಎ ಫಾರ್ ಆನಂದ್, ಉತ್ತರಕಾಂಡ ಸೇರಿದಂತೆ ಹಲವು ಚಿತ್ರಗಳ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!