ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹೊಸ ಚಿತ್ರಕ್ಕೆ ಬೇಲ್ ಎಂಬ ಟೈಟಲ್ ಇಡಲಾಗಿದೆ.
ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾದ ಪೋಸ್ಟರ್ ನಲ್ಲಿ ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿದ್ದು, ಇದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.
ವೆಂಕಟ್ ಕೆ ನಾರಾಯಣ್ ತಮ್ಮ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಶೀಘ್ರದಲ್ಲೇ ಟೀಸರ್ ಘೋಷಿಸುತ್ತೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವ ನನ್ನ ಕನಸು ನನಸಾಗಿದೆ. ಅವರು ದಶಕಗಳಿಂದ ಐಕಾನ್ ಆಗಿದ್ದಾರೆ. ಹಿಂದೆಂದೂ ಮಾಡದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ ಎಂದು ಪವನ್ ಒಡೆಯರ್ ಹೇಳಿದ್ದಾರೆ.
‘ಬೇಲ್’ ನಮಗೆ ವಿಶೇಷವಾದ ಯೋಜನೆಯಾಗಿದೆ. ಪ್ರೇಕ್ಷಕರು ಇಲ್ಲಿಯವರೆಗೆ ನೋಡಿರದ ಹೊಸ ದೃಷ್ಟಿಕೋನದಲ್ಲಿ ಶಿವಣ್ಣ ಅವರನ್ನು ಪ್ರಸ್ತುತಪಡಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ನಿರ್ಮಾಪಕ ವೆಂಕಟ್ ಕೆ ಕೊನಂಕಿ ಹೇಳಿದ್ದಾರೆ.





Be the first to comment