ಚಿರು ಈಗ ಶಿವಾರ್ಜುನ

ನಿರ್ಮಾಪಕರ ಹೆಸರೇ ಟೈಟಲ್ ಆಯ್ತು!

ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ `ಪೆÇ್ರಡಕ್ಷನ್ ನಂ 1` ಚಿತ್ರ ಕೆಲವು ದಿನಗಳ ಹಿಂದೆ ಆರಂಭವಾಗಿ, ನಿರಂತರ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರಕ್ಕೆ ಈಗ ‘ಶಿವಾರ್ಜುನ` ಎಂದು ನಾಮಕರಣ ಮಾಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾರ್ಜುನ್ ಅವರ ನಿರ್ಮಾಣದ ಚಿತ್ರವಿದು. ನಿರ್ಮಾಪಕರ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ.

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯುತ್ತಿದೆ. ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರಾಗ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ಚೇತನ್‍ಕುಮಾರ್(ಬಹದ್ದೂರ್) ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಮೃತ, ಅಕ್ಷತ, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!