ಪೋಕ್ಸೋ ಕೇಸ್ ಬೆನ್ನಲ್ಲೇ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಜಾನಿ ಮಾಸ್ಟರ್ ಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ.
ಜಾನಿ ಮಾಸ್ಟರ್ ತಮ್ಮ ಸಹಾಯಕ ನೃತ್ಯ ಸಂಯೋಜಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ.
ತಮಿಳಿನ `ತಿರುಚಿತ್ರಂಬಲಂʼ ಚಿತ್ರದ ʻಮೇಘಂ ಕರುಕಥʼ ಹಾಡಿಗಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ 2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಜಂಟಿಯಾಗಿ ಘೋಷಿಸಲಾಗಿತ್ತು.
ಪ್ರಶಸ್ತಿ ಪ್ರದಾನ ಮಾಡಲು ಎರಡು ಮೂರು ದಿನ ಬಾಕಿ ಇರುವಾಗ ಜಾನಿ ಮಾಸ್ಟರ್ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಪರಿಗಣಿಸಿ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಅಕ್ಟೋಬರ್ 8 ರಂದು ದೆಹಲಿಯಲ್ಲಿ ಆಯೋಜನೆಯಾಗಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
ತಮಗೆ ಲೈಂಗಿಕ ಕಿರುಕುಳ ಆಗಿದೆ ಎಂದು ಅವರ ಸಹೋದ್ಯೋಗಿ ಆರೋಪಿಸಿದ್ದರು. ಹೈದರಾಬಾದ್ ಮತ್ತು ಮುಂಬೈನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಜಾನಿ ಮತ್ತು ಅವರ ಪತ್ನಿ ತಮಗೆ ಥಳಿಸುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಸಂತಸ್ತೆಗೆ ಈಗ 21 ವರ್ಷ. ಅಪ್ರಾಪ್ತೆ ಆದಾಗಿನಿಂದಲೂ ತಮಗೆ ಲೈಂಗಿಕ ಕಿರುಕುಳ ಆಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Be the first to comment