‘ಶುಭ ಮಂಗಳ’ ಟೀಸರ್ ರಿಲೀಸ್

ಮೇಘನಾ ಗಾಂವ್ಕರ್‌ ನಟಿಸಿರುವ ಶುಭ ಮಂಗಳ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಿರೀಕ್ಷೆ ಹುಟ್ಟಿಸಿದೆ.

ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರ ನಿರ್ಮಿಸಿರುವ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

ಸಿದ್ಧಾರ್ಥ್‌ ಮಾಧ್ಯಮಿಕ, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಾಲಾಜಿ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ವೆರೈಟಿ ಹಾಡುಗಳಿವೆ. ಜೂಡಾ ಸ್ಯಾಂಡಿ ಮ್ಯೂಸಿಕ್, ರಾಕೇಶ್ ಬಿ ರಾಜ್ ಕ್ಯಾಮೆರಾ ಸಿನಿಮಾಕ್ಕಿದೆ. ಸಿನಿಮಾಗೆ ನಿರ್ದೇಶನದ ಜೊತೆಗೆ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಅವರುಅವ್ಯಕ್ತ ಬ್ಯಾನರ್ ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಖ್ಯಾತ ನಿರ್ದೇಶಕ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಲ್ ನಿರ್ದೇಶನದ ಶುಭಮಂಗಳ ಸಿನಿಮಾದ ಟೈಟಲ್ ಹೊಂದಿರುವ ಈ ಸಿನಿಮಾ ಯಾವ ರೀತಿ ಪ್ರೇಕ್ಷಕರನ್ನು ಮೋಡಿ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!