Shubman Gill – Sara Ali Khan: ಸಾರಾ ಅಲಿ ಖಾನ್ – ಶುಭ್ಮನ್ ಗಿಲ್ ಬ್ರೇಕಪ್‌?

ಸ್ಟಾರ್ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ ಮತ್ತು ಬಾಲಿವುಡ್‌ ನಟಿ ಸಾರಾ ಅಲಿ ಖಾನ್ ನಡುವೆ ಸಂಬಂಧ ಹಳಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಶುಭ್​ಮನ್ ಗಿಲ್, ಸಾರಾ ಅಲಿ ಖಾನ್ ಇಬ್ಬರೂ ಡೇಟಿಂಗ್‌ ಮಾಡುತ್ತಿದ್ದರು ಎಂಬ ವದಂತಿ ಹಲವು ದಿನಗಳಿಂದ ಹಬ್ಬಿದ್ದವು. ಸಾರಾ ಅಲಿ ಖಾನ್ ಮತ್ತು ಶುಭ್​ಮನ್ ಗಿಲ್ ಇಬ್ಬರೂ ತಮ್ಮ ಸಂಬಂಧವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಆದರೆ ಅವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿಮಾನದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು.

ವರದಿಗಳ ಪ್ರಕಾರ, ಸಾರಾ ಅಲಿ ಖಾನ್ ಮತ್ತು ಶುಭ್​ಮನ್ ಗಿಲ್ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಅನ್ ಫಾಲೋ ಮಾಡಿದ್ದಾರೆ. ಅಭಿಮಾನಿಗಳ ಹದ್ದಿನ ಕಣ್ಣಿಗೆ ಈ ವಿಚಾರ ಕಂಡು ಬಂದಿದೆ. ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಇದು ಅವರಿಬ್ಬರ ಸಂಬಂಧದಲ್ಲಿ ಒಡಕು ಮೂಡಿದೆ ಎನ್ನುವ ಅನುಮಾನಕ್ಕೆ ಕಾರಣವಾಗಿದೆ.

ಶುಭ್​ಮನ್ ಗಿಲ್ ಈ ಹಿಂದೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿತ್ತು. ಶುಭ್​ಮನ್ ಗಿಲ್ ಅವರನ್ನು ಸಾರಾ ಅಲಿ ಖಾನ್‌ಗಾಗಿ ತೊರೆದರು ಎಂದು ಸುದ್ದಿಯಾಗಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!