ಜುಲೈ 19 ರಂದು `ಸಿಂಗ’ ಚಿತ್ರ ತೆರೆಗೆ

ಯು ಕೆ ಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ `ಸಿಂಗ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಜುಲೈ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಹಿಂದೆ `ರಾಮ್‍ಲೀಲಾ` ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಡಾ||ಕೆ.ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ, ಗಣೇಶ್ ಸಂಕಲನ ಹಾಗೂ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಡಾ||ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ `ಸಿಂಗ` ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!