ತೆಲಂಗಾಣದಲ್ಲಿ ಪ್ರೇಕ್ಷಕರ ಕೊರತೆ ಉಂಟಾಗಿದ್ದು, ತೆಲಂಗಾಣ ಸ್ಟೇಟ್ ಸಿಂಗಲ್ ಥಿಯೇಟರ್ ಅಸೋಸಿಯೇಷನ್ ಮೇ 17 ರಿಂದ 9 ದಿನಗಳ ಕಾಲ ರಾಜ್ಯದಾದ್ಯಂತ ಸಿಂಗಲ್ ಸ್ಟ್ರೀನ್ ಚಿತ್ರಮಂದಿರಗಳನ್ನು ಮುಚ್ಚಲು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಕಳೆದ ಕೆಲ ವಾರಗಳಿಂದ ಟಾಲಿವುಡ್ ನಲ್ಲಿ ಯಾವ ಪ್ರಮುಖ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಪ್ರತಿ ವರ್ಷ ಏಪ್ರಿಲ್ – ಮೇ ತಿಂಗಳಿನಲ್ಲಿ ಸ್ಟಾರ್ ನಟರ ಸಿನಿಮಾಗಳು ರಿಲೀಸ್ ಆಗುತ್ತಿತ್ತು. ಈ ಬಾರಿ ಐಪಿಎಲ್ ಹಾಗೂ ಎಲೆಕ್ಷನ್ ಜೊತೆಯಾಗಿ ಬಂದಿರುವುದರಿಂದ ಹತ್ತಾರು ಚಿತ್ರತಂಡಗಳು ಈ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರಿಲೀಸ್ ಆಗಿರುವ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಬರುತ್ತಿಲ್ಲ. ಹಾಗಾಗಿ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ತೆಲಂಗಾಣದಲ್ಲಿ ಸುಮಾರು 400 ಕ್ಕೂ ಅಧಿಕ ಥಿಯೇಟರ್ ಗಳಿವೆ. ಇದೇ ಶುಕ್ರವಾರ ಆದರೆ ಮೇ 17 ರಿಂದ ಸಿಂಗಲ್ ಸ್ಕ್ರೀನ್ ಥಿಯೇಟರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಥಿಯೇಟರ್ ನಲ್ಲಿ ದುಡಿಯುವ ಕೆಲಸಗಾರರಿಗೆ ಸಂಬಳ, ಕರೆಂಟ್ ಬಿಲ್ ಗೆ ಸೇರಿದಂತೆ ಪ್ರತಿಯೊಂದಕ್ಕೂ ಹಣ ನೀಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕಷ್ಟವಾಗುತ್ತಿರುವುದರಿಂದ ಸಿಂಗಲ್ ಸ್ಕ್ರೀನ್ ಥಿಯೇಟರ್ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಮೇ.17 ರಿಂದ 25 ರವರೆಗೆ ಥಿಯೇಟರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇ.26 ರಂದು ಥಿಯೇಟರ್ ಓಪನ್ ಆಗಲಿದೆ.
Be the first to comment