Siren: ಸೈರನ್ ಟ್ರೈಲರ್ ಬಿಡುಗಡೆ

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿ ನಟನೆಯ ಸೈರನ್ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ಸಿನಿಮಾದ ಟ್ರೈಲರ್ ನ್ನು ಚಿತ್ರರಂಗದ ಹಲವು ಗಣ್ಯರು ಬಿಡುಗಡೆ ಮಾಡಿದರು. ಡಾಲಿ ಧನಂಜಯ್, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ , ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ‌.

ಚಿತ್ರವನ್ನು ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ.

ಪ್ರವೀರ್ ಶೆಟ್ಟಿ ಮಾತನಾಡಿ ‘ನಾನು ಈ ದಿನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದೆ. ಶ್ರೀಮುರಳಿ ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದು ಶಕ್ತಿ ತಂದಿದೆ. ನಿರ್ದೇಶಕರು ಶ್ರಮ ವಹಿಸಿ ಸಿನಿಮಾ ಮಾಡಿದ್ದಾರೆ ಎಂದರು.

ತಮಿಳು ನಟ ದೀನಾ, ಚಿತ್ರದ ನಾಯಕಿ ಲಾಸ್ಯ, ನಟಿ ಸ್ಪರ್ಶ ರೇಖಾ, ಸಂಗೀತ ನಿರ್ದೇಶಕ ಭಾರದ್ವಾಜ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!