Skanda: ಸೆ. 28ಕ್ಕೆ ಸ್ಕಂದ ರಿಲೀಸ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟಂಬರ್ 28ಕ್ಕೆ ರಿಲೀಸ್ ಆಗಲಿದೆ.

ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಸೆಪ್ಟೆಂಬರ್ 28ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಸ್ಕಂದ ಸಿನಿಮಾ ತೆರೆ ಕಾಣುತ್ತಿದೆ.

ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಮೆಚ್ಚುಗೆ ಪಡೆದಿವೆ. ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.

ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಕನ್ನಡತಿ ಶ್ರೀಲೀಲಾ, ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ.

ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾವನ್ನು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.

ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್‌ಎಸ್ ಮ್ಯೂಸಿಕ್ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!