ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆಯಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಇದು ಅಪ್ಪು ಅಭಿಮಾನಿಗಳು ಮಾಡಿದ ಕೆಲಸ ಎಂದು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದರು. ಈ ವಿಚಾರದಲ್ಲಿ ಇಬ್ಬರೂ ಸ್ಟಾರ್ ನಟರ ಅಭಿಮಾನಿಗಳ ನಡುವೆ ಆರೋಪ, ಪ್ರತ್ಯಾರೋಪ, ಟೀಕೆಗಳು ಜೋರಾಗಿ ಈಗಲೂ ನಡೆಯುತ್ತಲೇ ಇದೆ. ಈ ನಡುವೆ ಆಯೋಜಕರು ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಈ ತಂಡ ಘಟನೆ ಸಂಬಂಧ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದವರಿಗಾಗಿ ಹುಡುಕಾಟ ನಡೆದಿದೆ ಎಂದು ಎಸ್ ಪಿ ಬಿ.ಎಲ್. ಶ್ರೀಹರಿಬಾಬು ತಿಳಿಸಿದ್ದಾರೆ.
_____





Be the first to comment