ದಿ ಕೇರಳ ಸ್ಟೋರಿ ಸಿನಿಮಾ ನೋಡಲು ಅವಕಾಶ ನೀಡದವರು ಭಯೋತ್ಪಾದನೆಗೆ ಬೆಂಬಲ ನೀಡಿದಂತೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಚಿತ್ರ ಪ್ರದರ್ಶನ ರದ್ದು ಮಾಡಿರುವ ನಿರ್ಧಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ.
ದಿ ಕೇರಳ ಸ್ಟೋರಿ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರದರ್ಶನ ನಿಷೇಧಿಸುವಂತೆ ಆದೇಶಿಸಿದರು. ಈಗಾಗಲೇ ತಮಿಳುನಾಡಿನಲ್ಲಿ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ.
ಚಿತ್ರದ ಟ್ರೇಲರ್ ಬಿಡುಗಡೆಯಾದಾಗ ವೇಳೆ ಕೇರಳದ ಸುಮಾರು 32 ಸಾವಿರ ಮಹಿಳೆಯರನ್ನು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಮತಾಂತರಿಸಿ ಜಿಹಾದ್‌ಗೆ ಬಳಸಲಾಗಿದೆ ಎಂದು ಹೇಳಲಾಗಿತ್ತು. ಇದು ವಿವಾದ ಉಂಟು ಮಾಡಿದೆ.
ಹಲವು ರಾಜ್ಯಗಳಲ್ಲಿ ಈ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶಿಸಿದ್ದಾರೆ. ಅದಾ ಶರ್ಮಾ, ಯೋಗಿತಾ ಬಿಹಾನಿ, ಸಿದ್ಧಿ ಇದ್ನಾನಿ, ಸೋನಿಯಾ ಬಲಾನಿ ಇತರರು ಅಭಿನಯಿಸಿದ್ದಾರೆ.
__
Be the first to comment