ಮರೀಚಿ ಹೆಸರಿನ ಥ್ರಿಲ್ಲರ್ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಜೋಡಿಯಾಗಿ ನಟಿ ಸೋನುಗೌಡ ನಟಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಸೋನು ಗೌಡ ನಾಯಕಿಯಾಗಿ ನಟಿಸುತ್ತಿದ್ದು, ಅವರು ಕಥೆಗೆ ಟ್ವಿಸ್ಟ್ ತರಲಿದ್ದಾರೆ ಎನ್ನಲಾಗಿದೆ. ಅವರು ಹ್ಯಾಪಿ ನ್ಯೂ ಇಯರ್ ನಂತರ ಎರಡನೇ ಬಾರಿಗೆ ವಿಜಯ್ ರಾಘವೇಂದ್ರ ಜೊತೆ ನಟಿಸುತ್ತಿದ್ದಾರೆ.
ಕಪಟ ನಾಟಕ ಪಾತ್ರಧಾರಿ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸಿದ್ಧ್ ರುವ್ ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿಯುತ್ತಿದ್ದಾರೆ.
ಬ್ರಹ್ಮ ದೇವರ ಮಗ ಮರೀಚಿ. ಒಳ್ಳೆಯದು ಮತ್ತು ಕೆಟ್ಟದ್ದಕ್ಕೆ ಮರೀಚಿ ಗಾಡ್ ಫಾದರ್ ಎಂದು ಪರಿಗಣಿಸಲಾಗಿದೆ. ಆ ಒಂದು ಪರಿಕಲ್ಪನೆ ಸುತ್ತ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಸಿದ್ಧ್ ರುವ್ ಹೇಳಿದ್ದಾರೆ.
ಎಸ್ ಎಸ್ ರೆಕ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ನವೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.
ಮನೋಹರ್ ಜೋಶಿ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಲಿದ್ದಾರೆ. ತಾರಾಗಣದಲ್ಲಿ ಆರ್ಯನ್, ಸ್ಪಂದನಾ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಇದ್ದಾರೆ.
___

Be the first to comment