ಗಾಯಕ ಸೋನು ನಿಗಮ್ ಕನ್ನಡ ಚಿತ್ರರಂಗದಿಂದ ಬ್ಯಾನ್ ಆಗುತ್ತಿದ್ದಂತೆ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.
ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಉಗ್ರ ದಾಳಿಗೆ ತಳುಕು ಹಾಕಿದ ಸೋನು ನಿಗಮ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾರೂ ಸೋನು ನಿಗಮ್ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್ ನೈಟ್ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಬಾರದು ಎಂದು ನಿರ್ಣಯ ತೆಗೆದುಕೊಂಡ ಬೆನ್ನಲ್ಲೇ ಸೋನು ನಿಗಮ್ ಎಚ್ಚೆತ್ತುಗೊಂಡಿದ್ದಾರೆ.
‘ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ. ನಾನು ಕನ್ನಡಿಗರಲ್ಲಿ ಕ್ಷಮೆ ಕೇಳುತ್ತೇನೆ’ ಎಂದು ಸೋನು ನಿಗಮ್ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಯುವಕ ಸೋನು ನಿಗಮ್ ಹಾಡುವ ವೇಳೆ ಕನ್ನಡ ಹಾಡಿಗೆ ಒತ್ತಾಯಿಸಿದ್ದು ಈ ವೇಳೆ ಸೋನು ನಿಗಮ್ ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು ಹೇಳಿದ್ದರು.
ಸೋನು ನಿಗಮ್ ಅವರು ಹೇಳಿಕೆಗೆ ಸ್ಪಷ್ಟನೆ ಕೊಟ್ಟರೇ ಹೊರತು ಕ್ಷಮೆ ಕೇಳಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಫಿಲ್ಮ್ ಚೇಂಬರ್ ಅವರಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ.
—-

Be the first to comment