ಸೋನು ನಿಗಮ್ ಕ್ಷಮೆ

ಕನ್ನಡಿಗರ ಭಾಷಾಪ್ರೇಮವನ್ನ ಪಹಲ್ಗಾಮ್​ ಭಯೋತ್ಪಾದನೆಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದ ಬಾಲಿವುಡ್ ಗಾಯಕ  ಸೋನು ನಿಗಮ್ ಕನ್ನಡಿಗರಲ್ಲಿ ಬೇಷರತ್ ಆಗಿ ಕ್ಷಮೆಯಾಚಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ  ಟಿ. ಎ. ನಾರಾಯಣ ಗೌಡ ಸೋನು ನಿಗಮ್ ಕ್ಷಮೆಯಾಚಿಸಿರುವ ವಿಷಯವನ್ನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಹಿತ ಹಂಚಿಕೊಂಡಿದ್ದಾರೆ. ಇದರಲ್ಲಿ ಸೋನು ನಿಗಮ್ ತಮ್ಮ ಹೇಳಿಕೆಗೆ ಕನ್ನಡಿಗರಿಗೆ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.

‘ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದರು. ನಾನು ಹಿಂದೆಯೂ ಹೇಳಿದ್ದೇನೆ. ನಾವೆಲ್ಲರೂ ಸೋನು ನಿಗಮ್ ಅವರ ಹಾಡುಗಳನ್ನು ಇಷ್ಟಪಟ್ಟವರು. ಅವರ ಕುರಿತು ವೈಯಕ್ತಿಕವಾಗಿ ಯಾವ ದ್ವೇಷ, ಮುನಿಸು ನಮಗೆ ಇರಲಿಲ್ಲ. ಆ ಒಂದು ಮಾತನ್ನು ಅರಗಿಸಿಕೊಳ್ಳಲು ನಮ್ಮಿಂದ ಆಗಿರಲಿಲ್ಲ. ಅದಕ್ಕಾಗಿ ನಮ್ಮ ಪ್ರತಿಭಟನೆ, ಆಕ್ರೋಶ ಸಹಜವಾಗೆ ಇತ್ತು. ಇದೀಗ ಅವರು ಕ್ಷಮೆ ಯಾಚಿಸಿದ್ದಾರೆ. ಇಲ್ಲಿಗೆ ಇದನ್ನು ಮುಗಿಸುವುದು ಒಳ್ಳೆಯದು’ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ  ಸೋನು ನಿಗಮ್ ಅವರು,  ‘ನನ್ನ ಪ್ರೀತಿಯ ಕನ್ನಡಿಗ ಕುಟುಂಬದವರೇ, ನನ್ನ ಉದ್ದೇಶ ಕನ್ನಡಿಗರ ಮನಸ್ಸಿಗೆ ನೋವುಂಟು ಮಾಡುವುದು ಆಗಿರಲಿಲ್ಲ. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರೊಂದಿಗೆ ಮಾತನಾಡಿದ್ದೇನೆ. ನೀವು ಯಾರನ್ನಾದರೂ ಪ್ರೀತಿ ಮಾಡಿದರೆ, ಅವರೊಂದಿಗೆ ಉತ್ತಮ ಸಂಬಂಧ ಹೊಂದಿರಬೇಕು ಎಂದು ಬಯಸಿದರೆ, ನೀವು ಕ್ಷಮೆ ಕೇಳುವುದರಲ್ಲಿ ತಪ್ಪಿಲ್ಲ. ನಾನು ಏನಾದಾರೂ ತಪ್ಪಾಗಿ ಮಾತನಾಡಿದ್ದರೆ ನಿಮ್ಮಲ್ಲಿ ಯಾರಿಗಾದರೂ ನನ್ನ ಮಾತುಗಳಿಂದ ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ. ನೀವು ನನಗೆ ಅಪಾರವಾದ ಪ್ರೀತಿ ಕೊಟ್ಟಿದ್ದೀರಿ. ಅಪಾರ್ಥದಿಂದ ಈ ಪ್ರೀತಿ ಹಾಳಾಗುವುದು ಬೇಡ. ಮತ್ತೊಮ್ಮೆ ಕನ್ನಡಿಗರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಹೇಳಿದ್ದಾರೆ.

—-

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!