ಸಂಗೀತ ಕಾರ್ಯಕ್ರಮವೊಂದರದಲ್ಲಿ ಕನ್ನಡ ಹಾಡು ಹಾಡುವಂತೆ ಕೇಳಿದ್ದಕ್ಕೆ ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧ ಪಟ್ಟಂತೆ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 15ಕ್ಕೆ ಮುಂದೂಡಿದೆ.
ರಾಜ್ಯ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರು ಅರ್ಜಿ ವಿಚಾರಣೆ ನಡೆಸಿದರು. ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಅರ್ಜಿದಾರರ ವಕೀಲರ ವಾದವನ್ನು ಒಪ್ಪಲಾಗುವುದಿಲ್ಲ ಎಂದು ಮೇ 15ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದರು.
ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ಮೇ ಮೊದಲವಾರ ಪ್ರಕರಣ ದಾಖಲು ಮಾಡಲಾಗಿತ್ತು. ಅವಲಹಳ್ಳಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಸೋನು ನ್ಯಾಯಾಲಯದ ಮೊರೆ ಹೋಗಿ ಎಫ್ಐಆರ್ ರದ್ದಿಗೆ ಕೋರಿದ್ದರು.
ಏಪ್ರಿಲ್ 25, 26ರಂದು ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಮೇ 2ರಂದು ದೂರು ನೀಡಲಾಗಿತ್ತು. ಪೊಲೀಸರು ಮೇ 3ರಂದು ಎಫ್‌ಐಆರ್ ದಾಖಲಿಸಿದ್ದರು.
‘ಕನ್ನಡ, ಕನ್ನಡ’ ಎನ್ನುತ್ತಾ ಕನ್ನಡಿಗರನ್ನು ಕೆರಳಿಸಿದ್ದ ಸೋನು ನಿಗಮ್ ನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕ್ಷಮೆ ಕೇಳುವವರೆಗೂ ತಾತ್ಕಾಲಿಕವಾಗಿ ಬ್ಯಾನ್ ಮಾಡಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿ ಗಾಯಕನನ್ನು ಬ್ಯಾನ್ ಮಾಡಿದೆ.
—–

Be the first to comment